ಪ್ರಗತಿವಾಹಿನಿ ಸುದ್ದಿ; ಬೆಳಗಾವಿ : ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷೆಯಷ್ಟು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಈ ಚುನಾವಣೆಯಲ್ಲಿ ಎಂಇಎಸ್ ಹಾಗೂ ಮರಾಠಿಗರ ಒಳ ಜಗಳ ಬಿಜೆಪಿಗೆ ಲಾಭವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಮಾತನಾಡಿದ ಅವರು, ಮೋದಿ ಮೋಡಿಯಿಂದ ಬಿಜೆಪಿ ಪಾಲಿಕೆ ಚುನಾವಣೆ ಗೆಲುವೆನು ಪಡೆದಿಲ್ಲ. ಚುನಾವಣೆಯ ಬಗ್ಗೆ ಆಶ್ಚರ್ಯ ಪಡೆಬೇಕಿಲ್ಲ. ಕಾಂಗ್ರೆಸ್ ಹೊಂದಾಣಿಕೆ ಕೊರತೆಯಿಂದ ಬಿಜೆಪಿ ಸ್ಥಾನ ಪಡೆದುಕೊಂಡಿದೆ ಎಂದಿದ್ದಾರೆ.
ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಂಸತ್ತು ಚುನಾವಣೆಯನ್ನು ಗೆದ್ದಷ್ಟು ಬೊಗಳೆ ಹೊಡೆಯುತ್ತಿದೆ ಎಂದು ಕಮಲದ ವಿರುದ್ಧ ವಾಗ್ದಾಳಿ ನಡೆಸಿದರು.
ಲೆಕ್ಕಾಚಾರದ ಕ್ಷೇತ್ರಗಳು ‘ ಕೈ’ ವಶ: ಲೆಕ್ಕಾಚಾರದ ಕ್ಷೇತ್ರಗಳು ಕೈ ವಶವಾಗಿವೆ. ಇನ್ನೂ 8 ಸೀಟು ಬರಬೇಕಿತ್ತು. ಆದರೆ ಸ್ವಲ್ಪ ಹಿನ್ನಡೆಯಾಗಿದೆ. ಕಾಂಗ್ರೆಸ್ ವೈಫಲ್ಯಗಳಲ್ಲ ನಮ್ಮ ಶಕ್ತಿ ಪ್ರದರ್ಶನ ಮಾಡಿದ್ದೇವೆ. ಗೆಲ್ಲುವ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ ಎಂದರು.
ಬಿಜೆಪಿ ಆಡಳಿತದಿಂದ ಜನರಿಗೆ ಸಮಸ್ಯೆ ಆಗುತ್ತಿದೆ ಎಂದು ಜನರು ಹೇಳುತ್ತಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಹೌದು, ಆದರೆ ಬಿಜೆಪಿಯವರು ಮರಾಠಿಗರನ್ನು ಬಳಸಿಕೊಂಡಿದ್ದಾರೆ. ಅವರಿಂದ ಬಿಜೆಪಿ ಹೆಚ್ಚು ಸ್ಥಾನ ಪಡೆಯಲು ಸಾಧ್ಯವಾಗಿದೆ ಎಂದು ತಿಳಿಸಿದರು.
ನಮ್ಮ ಗೆಲುವು ನಮಗೆ ತೃಪ್ತಿ ತಂದಿದೆ. ಕೆಪಿಸಿಸಿ ಅಧ್ಯಕ್ಷರಿಗೆ 15 ಸ್ಥಾನ ಗೆಲುವು ಪಡೆಯುತ್ತೇವೆ ಎಂದು ಹೇಳಲಾಗಿತ್ತು. ಹೆಚ್ಚು ಕಡಿಮೆ ಸಂಖ್ಯೆ ಹತ್ತಿರ ಬಂದಿದ್ದೇವೆ. ಪಕ್ಷೇತರ ಐದು ಜನರು ನಮ್ಮೊಂದಿಗೆ ಇದ್ದಾರೆ. ಕಾಂಗ್ರೆಸ್ ಕಳೆದುಕೊಂಡ 8 ಕ್ಷೇತ್ರದಲ್ಲಿ ದಕ್ಷಿಣದಲ್ಲಿ ಮೂರು, ಉತ್ತರದಲ್ಲಿ 5 ನೇರವಾಗಿ ಕಳೆದುಕೊಂಡಿದ್ದೇವೆ ಎಂದು ಹೇಳಿದರು.
ಪಾಲಿಕೆ ಚುನಾವಣೆಯಲ್ಲಿ ನಿರೀಕ್ಷೆ ಕ್ಷೇತ್ರ ಸೋಲಿಕೆ ಕಾರಣ, ಮೈನಸ್ ಯಾವ ಕ್ಷೇತ್ರದಲ್ಲಿ ಆಗಿದೆ. ಅದನ್ನು ತಿದ್ದುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ವಿಧಾನಸಭಾ ಚುನಾವಣೆ; ಬಿಜೆಪಿ ಉಸ್ತುವಾರಿಗಳ ನೇಮಕ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ