Kannada NewsLatest

ಬೆಳಗಾವಿಯಲ್ಲಿ ಲಾಠಿ ಚಾರ್ಜ್; ಪಾಲಿಕೆ ಚುನಾವಣೆಯಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಮೊದಲ ಬಾರಿಗೆ ಭರ್ಜರಿ ಗೆಲುವು ಸಾಧಿಸಿದೆ.

ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 36 ವಾರ್ಡ್ ಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದು, ಮೊದಲ ಬಾರಿಗೆ ಪಾಲಿಕೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಂತಾಗಿದೆ.  ಈ ಮೂಲಕ ಎಂಇಎಸ್ ಪುಂಡಾಟಕ್ಕೆ ಸಂಪೂರ್ಣ ಕಡಿವಾಣ ಬಿದ್ದಂತಾಗಿದೆ.

Home add -Advt

ಬಿಜೆಪಿ 36, ಕಾಂಗ್ರೆಸ್ 9, ಎಂಇಎಸ್ 2, ಪಕ್ಷೇತರ 5 ಹಾಗೂ ಎಐಎಂಐಎಂ 1 ವಾರ್ಡ್ ನಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಬಿಜೆಪಿ ವಿಜಯೋತ್ಸವದ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ವೇಳೆ ನೂಕು ನುಗ್ಗಲಿನಿಂದ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಬೈಕ್ ಗಳು ಜಖಂಗೊಂಡಿವೆ.

ಬೆಳಗಾವಿಯಲ್ಲಿ ಎಂಇಎಸ್ ಸಂಪೂರ್ಣ ನಿರ್ನಾಮ

Related Articles

Back to top button