Kannada NewsLatest

ಬೆಳಗಾವಿಯಲ್ಲಿ 24 ವಾರ್ಡ್ ಗಳಲ್ಲಿ ಬಿಜೆಪಿ ಗೆಲುವು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದರೆ ಕಲಬುರ್ಗಿ ಮಹಾನಗರ ಪಾಲಿಕೆ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ.

ಬೆಳಗಾವಿ ಮಹಾನಗರ ಪಾಲಿಕೆಯ 37 ವಾರ್ಡ್ ಗಳ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ 24, ಕಾಂಗ್ರೆಸ್ 6, ಎಂಇಎಸ್ 2, ಪಕ್ಷೇತರ 4 ಹಾಗೂ ಎಐಎಂಐಎಂ ಒಂದು ವಾರ್ಡ್ ನಲ್ಲಿ ಗೆಲುವು ಸಾಧಿಸಿದೆ.

ಇನ್ನು ಕಲಬುರ್ಗಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ 7, ಬಿಜೆಪಿ 5, ಪಕ್ಷೇತರರು 1 ವಾರ್ಡ್ ನಲ್ಲಿ ಗೆಲುವು ಸಾಧಿಸಿದ್ದಾರೆ. ಇನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 20 ವಾರ್ಡ್ ಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 12 ವಾರ್ಡ್ ಗಳಲ್ಲಿ ಪಕ್ಷೇತರರು ಮೂರು ವಾರ್ಡ್ ಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆ ಫಲಿತಾಂಶ -ಕ್ಷಣ ಕ್ಷಣಕ್ಕೂ Update

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button