Kannada NewsLatest

ಬೆಳಗಾವಿ ಮಹಾನಗರ ಪಾಲಿಕೆ; ಮರುಚುನಾವಣೆಗೆ ಆಗ್ರಹಿಸಿ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ. ಮರುಚುನಾವಣೆ ನಡೆಸಬೇಕು ಎಂದು ಆಗ್ರಹಿಸಿ ಪರಾಭವಗೊಂಡ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ಪಾಲಿಕೆ ಚುನಾವಣೆ ನಡೆಸಲಾಗಿದೆ. ಮತದಾನದ ವೇಳೆ ವಿವಿ ಪ್ಯಾಟ್ ಹಾಕಿಲ್ಲ ಅಲ್ಲದೇ ಮತದಾರರ ಪಟ್ಟಿಯಲ್ಲಿ ಹಲವರ ಹೆಸರೇ ಇರಲಿಲ್ಲ. ಇದರಿಂದ ಹಲವರು ಮತದಾನ ಮಾಡಲು ಸಾಧ್ಯವಾಗಿಲ್ಲ. ಸಾಕಷ್ಟು ಕಡೆ ನಕಲಿ ಮತದಾನ ಕೂಡ ನಡೆದಿದೆ. ಇಷ್ಟಾದರೂ ಚುನಾವಣಾಧಿಕಾರಿಗಳು ಕ್ರಮಕೈಗೊಳ್ಳದಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತದಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಚುನಾವಣೆ ನಡೆಸಲಾಗಿದೆ. ಹಾಗಾಗಿ ಬೆಳಗಾವಿ ಮಹಾನಗರ ಪಾಲಿಕೆಗೆ ಮರುಚುನಾವಣೆ ನಡೆಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಸೋಮವಾರದಿಂದ ವಿಧಾನ ಮಂಡಲ ಅಧಿವೇಶನ; ಬೊಮ್ಮಾಯಿ ಸರಕಾರಕ್ಕೆ ಮೊದಲ ಅಧಿವೇಶನ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button