Latest

ಬ್ಲ್ಯಾಕ್ ಫಂಗಸ್; ಅಪಾಯದ ಮುನ್ಸೂಚನೆಯಿದ್ದರೂ ಸರ್ಕಾರದ ನಿರ್ಲಕ್ಷ್ಯ; ಹೆಚ್.ಡಿ.ಕೆ ಕಿಡಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬ್ಲ್ಯಾಕ್ ಫಂಗಸ್ ನ್ನು (ಮ್ಯೂಕರ್‌ ಮೈಕೊಸಿಸ್‌) ತೆಲಂಗಾಣ, ತಮಿಳುನಾಡು, ರಾಜಸ್ಥಾನ, ಒಡಿಶಾ, ಗುಜರಾತ್‌, ಚಂಡೀಗಢದಲ್ಲಿ ಸಾಂಕ್ರಾಮಿಕ ರೋಗ ಎಂದು ಘೋಷಿಸಲಾಗಿದೆ. ರಾಜ್ಯವೂ ಈ ಮಾರಕ ಕಾಯಿಲೆಯನ್ನು ಈ ಕೂಡಲೇ ‘ಸಾಂಕ್ರಾಮಿಕ’ ಎಂದು ಘೋಷಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಸಾಂಕ್ರಾಮಿಕ ರೋಗಗಳ ನಿರ್ವಹಣೆ ವಿಚಾರದಲ್ಲಿ ರಾಜ್ಯ ಸರ್ಕಾರ ತೋರುತ್ತಿರುವ ಆಲಸ್ಯ ಸರಿಯಲ್ಲ. ಕಪ್ಪು ಶಿಲೀಂಧ್ರ ರೋಗದ ನಿರ್ವಹಣೆಯಲ್ಲಿ ಸರ್ಕಾರ ಪದೇ ಪದೆ ಎಡವುತ್ತಿರುವುದು ಕಾಣಿಸುತ್ತಿದೆ. ರೋಗದ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳ ದಾಸ್ತಾನು ಹೊಂದದೇ ಇರುವುದು, ಅಗತ್ಯ ಪ್ರಮಾಣದ ಔಷಧವನ್ನು ಕೇಳಿ ಪಡೆದುಕೊಳ್ಳದೇ ಇರುವುದು ಇದಕ್ಕೆ ಸಾಕ್ಷಿ ಎಂದು ಕಿಡಿಕಾರಿದ್ದಾರೆ.

Home add -Advt

ಕೋವಿಡ್‌ನಿಂದ ಗುಣವಾದವರೇ ಹೆಚ್ಚಾಗಿ ಕಪ್ಪು ಶಿಲೀಂಧ್ರ ಕಾಯಿಲೆಗೆ ತುತ್ತಾಗುತ್ತಾರೆ ಎಂದು ತಜ್ಞರು ಹೇಳಿದ್ದಾರೆ. ಹಾಗಾದರೆ, ಕಪ್ಪು ಶಿಲೀಂಧ್ರದ ಸಂಭಾವ್ಯ ಅಪಾಯ ಕರ್ನಾಟಕಕ್ಕೆ ಹೆಚ್ಚಿದೆ. ಕೋವಿಡ್‌ ಪ್ರಕರಣಗಳು ಕರ್ನಾಟಕದಲ್ಲಿ ಅತ್ಯಧಿಕ ಪ್ರಮಾಣದಲ್ಲಿರುವಾಗ ಈ ಕಪ್ಪು ಶಿಲೀಂಧ್ರ ರೋಗವೂ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುವ ಅಪಾಯವಿದೆ ಎಂದರ್ಥ. ಈ ನಿಟ್ಟಿನಲ್ಲಿ ಕಪ್ಪು ಶಿಲೀಂಧ್ರ ರೋಗವನ್ನು ಸರ್ಕಾರ ಕೂಡಲೇ ಸಾಂಕ್ರಾಮಿಕ ರೋಗ ಎಂದು ಘೋಷಿಸಬೇಕು. ಈ ಕಾಯಿಲೆಯ ಚಿಕಿತ್ಸೆಗೆ ಬೇಕಿರುವ ಔಷಧಗಳನ್ನು ಸಮರ್ಪಕವಾಗಿ ಸಂಗ್ರಹಿಸಬೇಕು. ಇದರ ವಿರುದ್ಧ ಹೋರಾಡಲು ಅಗತ್ಯವಿರುವ ನೇತ್ರ ತಜ್ಞರು, ಇಎನ್‌ಟಿ ಪರಿಣತರು, ಜನರಲ್ ಸರ್ಜನ್‌ಗಳು, ನರರೋಗ ತಜ್ಞರು, ದಂತವೈದ್ಯರನ್ನು ಸರ್ಕಾರ ಸನ್ನದ್ಧ ಸ್ಥಿತಿಯಲ್ಲಿ ಇಡಬೇಕು ಎಂದು ಒತ್ತಾಯಿಸಿದ್ದಾರೆ.
ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್ ವಿಧಿವಶ

Related Articles

Back to top button