ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪ್ರಸ್ತುತ ಧಾರವಾಡದಲ್ಲಿ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂದಾಖಲೆಗಳ ಉಪ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಮತಿ ನಜ್ಮಾ ಎಂ.ಪೀರಜಾದೆ ಅವರಿಗೆ ೨೦೧೯-೨೦ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಲಭಿಸಿದೆ.
ಈ ಮುಂಚೆ ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಜ್ಮಾ ಪೀರಜಾದೆ ಅವರು, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಲಂಬಾಣಿ ತಾಂಡಾ ಹಾಗೂ ಗೊಲ್ಲರ ಹಟ್ಟಿ ಜನವಸತಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಿ, ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಅದೇ ರೀತಿ ಇಲಾಖೆಯಿಂದ ಹಮ್ಮಿಕೊಳ್ಳಲಾದ ವಿವಿಧ ಜನಪರ ಯೋಜನೆಗಳಲ್ಲಿ ಸಕ್ರೀಯವಾಗಿ ತಮ್ಮನ್ನು ತೊಡಗಿಸಿಕೊಂಡು ಗ್ರಾಮೀಣ ಜನರ ಹಾಗೂ ವಿಶೇಷವಾಗಿ ರೈತಸಮುದಾಯದ ಮೆಚ್ಚುಗೆಗೆ ಪಾತ್ರರಾಗಿದ್ದರು.
ಇವರ ಸೇವೆಯನ್ನು ಪರಿಗಣಿಸಿ ರಾಜ್ಯಮಟ್ಟದ ಸೇವಾ ಸರ್ವೋತ್ತಮ ಪ್ರಶಸ್ತಿ ನೀಡುವಂತೆ ಭೂಮಾಪನ ಇಲಾಖೆಯ ಆಯುಕ್ತರು ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು. ಪೀರಜಾದೆ ಅವರ ಅತ್ಯುನ್ನತ ಸೇವೆಯನ್ನು ಪರಿಗಣಿಸಿ ಸೇವಾ ಸರ್ವೋತ್ತಮ ಪ್ರಶಸ್ತಿಯನ್ನು ಸರ್ಕಾರ ನೀಡಿದೆ. ಪ್ರಶಸ್ತಿಯು ೨೫ ಸಾವಿರ ರೂಪಾಯಿ ಪ್ರೋತ್ಸಾಹಧನ ಮತ್ತು ಪ್ರಮಾಣಪತ್ರವನ್ನು ಒಳಗೊಂಡಿರುತ್ತದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ