
ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ದೇಶದ ಅಖಂಡತೆಗೆ ಶ್ರಮಿಸಿದ ಧೀಮಂತ ನಾಯಕ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ ನಿಮಿತ್ತವಾಗಿ, ನಿಪ್ಪಾಣಿ ಬಿಜೆಪಿ ಗ್ರಾಮೀಣ ಯುವಮೋರ್ಚಾ ವತಿಯಿಂದ ಸಸಿ ನೆಡುವ ಕಾರ್ಯಕ್ರಮಕ್ಕೆ ಬಸವಜ್ಯೋತಿ ಯೂಥ್ ಫೌಂಡೇಶನ್ ಅಧ್ಯಕ್ಷ್ಯ ಬಸವಪ್ರಸಾದ ಜೊಲ್ಲೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆಯ ನಿಮಿತ್ತ ಬಿಜೆಪಿ ಪಕ್ಷ ಬೂತ್ ಮಟ್ಟದಲ್ಲಿ ಹಲವು ಪರಿಸರ ಸ್ನೇಹಿ ಕಾರ್ಯಕ್ರಮ ಹಮ್ಮಿಕೊಂಡಿದೆ. ನಿಪ್ಪಾಣಿ ತಾಲೂಕಿನಲ್ಲಿ ಸುಮಾರು 50 ಸಾವಿರ ಸಸಿಗಳನ್ನು ನೆಡುವ ಗುರಿಯಿಟ್ಟುಕೊಂಡಿದ್ದೇವೆ. ದೇಶದ ಹಿತಕ್ಕಾಗಿ ಶ್ರಮಿಸಿದ ಧೀಮಂತ ಚೇತನ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ನೆನಪು ಸದಾ ಅಮರ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮೀಣ ಅಧ್ಯಕ್ಷರಾದ ಪವನ ಪಾಟೀಲ, ತಾ.ಪಂ. ಸದಸ್ಯರಾದ ದಾದಾಸೋ ನರಗಟ್ಟೆ, ನಿತೇಶ ಖೋತ, ದೇವಪ್ಪಾ ದೇವಕತೆ, ಗ್ರಾಮೀಣ ಯುವ ಮೋರ್ಚಾ ಅಧ್ಯಕ್ಷರಾದ ರಾಜು ಭದ್ರಗಡೆ, ಹಾಗೂ ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ಕನಿಷ್ಠ 30 ದಿನದ ಅಧಿವೇಶನ ನಡೆಸಿ – ಡಾ.ಪ್ರಭಾಕರ ಕೋರೆ ಆಗ್ರಹ
ಕೆ.ಆರ್.ಎಸ್ ಬಿರುಕು ನಿಜ: 67 ಕೋಟಿ ರೂ ವೆಚ್ಚದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದೆ ಎಂದ ಸುಮಲತಾ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ