
ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಇಂದು ನಿಪ್ಪಾಣಿ ಮತಕ್ಷೇತ್ರದ ಭಾಟನಾಗನೂರಿನಲ್ಲಿ, ದೇಶದ ಅಖಂಡತೆಗೆ ಶ್ರಮಿಸಿದ ಧೀಮಂತ ನಾಯಕ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ ನಿಮಿತ್ತವಾಗಿ, ಬಿಜೆಪಿ ಗ್ರಾಮೀಣ ಯುವಮೋರ್ಚಾ ಹಾಗೂ ಮಹಿಳಾ ಮೋರ್ಚಾದ ವತಿಯಿಂದ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಬಸವಜ್ಯೋತಿ ಯೂಥ್ ಫೌಂಡೇಶನ್ ಅಧ್ಯಕ್ಷ್ಯರಾದ ಬಸವಪ್ರಸಾದ ಜೊಲ್ಲೆಯವರು ಸಸಿಗಳನ್ನು ನೆಟ್ಟರು.
ದೇಶದ ಏಕತೆ ಮತ್ತು ಸಮಗ್ರತೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟ ಡಾ. ಶ್ಯಾಮ್ ಪ್ರಸಾದ್ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ ಡಾ. ಶ್ಯಾಮ ಪ್ರಸಾದ ಮುಖರ್ಜಿ ಅವರ ಪುಣ್ಯಸ್ಮರಣೆಯ ಸ್ಮರಣಾರ್ಥ ಬಿಜೆಪಿ ಪಕ್ಷ ಬೂತ್ ಮಟ್ಟದಲ್ಲಿ ಹಲವು ಪರಿಸರ ಸ್ನೇಹಿ ಕಾರ್ಯಕ್ರಮ ಹಮ್ಮಿಕೊಂಡಿದೆ. ನಿಪ್ಪಾಣಿ ಮತಕ್ಷೇತ್ರದೊಳಗೆ ಸುಮಾರು 50 ಸಾವಿರ ಸಸಿಗಳನ್ನು ನೆಡುವ ಗುರಿಯಿಟ್ಟುಕೊಂಡಿದ್ದೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆಯ ನಿರ್ದೇಶಕರಾದ ಪ್ರಕಾಶ ಶಿಂಧೆ, ಸಮಿತ ಸಾಸನೆ, ಬಾಳಾಸಾಹೇಬ ಪಾಟೀಲ, ಪಿಂಟು ಪವಾರ, ಕಿರಣ್ ನಿಕಾಡೆ, ಮಧುಕರ ಪಾಟೀಲ್, ಗ್ರಾಮೀಣ ಯುವ ಮೋರ್ಚಾ ಅಧ್ಯಕ್ಷರಾದ ರಾಜು ಭದ್ರಗಡೆ, ಕಿಶನ ಪಾಟೀಲ, ಇಂದ್ರಜಿತ ಪಾಟೀಲ, ಗ್ರಾಮ ಪಂಚಾಯತಿ ಸದಸ್ಯರು, ಉಪಸ್ಥಿತರಿದ್ದರು.
ರಮೇಶ್ ಪ್ರಕರಣದ ಸತ್ಯ ಸದ್ಯದಲ್ಲೆ ಹೊರ ಬರುತ್ತೆ; ಬಿ.ಸಿ.ಪಾಟೀಲ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ