
ಪ್ರಗತಿವಹಿನಿ ಸುದ್ದಿ; ನಿಪ್ಪಾಣಿ: ಇಂದು ನಿಪ್ಪಾಣಿ ಮತಕ್ಷೇತ್ರದ ಅಕ್ಕೋಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಅಣ್ಣಾಸಾಹೇಬ ಜೊಲ್ಲೆ ಯವರು ಧಿಡೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ, ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ನೀಡುತ್ತಿದ್ದು, ಜನದಟ್ಟಣೆ ಉಂಟಾಗುತ್ತಿದೆ. ಹೀಗಾಗಿ ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆ ಹಾಗೂ ಇನ್ನು ಒಂದು ಲಸಿಕಾ ಕೇಂದ್ರ ಮಾಡಿ, ಸಾಮಾಜಿಕ ಅಂತರ ಪಾಲಿಸುವಂತೆ ಸೂಚಿಸಿದರು.
18 ವರ್ಷ ಮೇಲ್ಪಟ್ಟ ಎಲ್ಲರು ಉಚಿತ ಲಸಿಕೆ ಪಡೆಕೊಳ್ಳಬೇಕು ಕೊರೊನಾದಿಂದ ಆರೋಗ್ಯ ಕಾಪಾಡಲು ಲಸಿಕೆ ಪಡೆಯುವುದು ಅತ್ಯಗತ್ಯ. ಲಸಿಕೆ ಬಗ್ಗೆ ಯಾವುದೇ ಭಯಬೇಡ. ತಪ್ಪದೇ ಎಲ್ಲರು ಲಸಿಕೆ ಪಡೆಯಿರಿ ಎಂದು ಮನವಿ ಮಾಡುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳಾದ ಡಾ. ಶೀತಲ ಕುಲಕರ್ಣಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಹಾಗು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ರಮೇಶ್ ಜಾರಕಿಹೊಳಿ ನಿರ್ಧಾರದ ಬಗ್ಗೆ ಏನೂ ಹೇಳಲ್ಲ ಎಂದ ವಿಶ್ವನಾಥ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ