Kannada NewsLatest

ನೂಪುರ್ ಶರ್ಮಾ ಪ್ರತಿಕೃತಿ ಗಲ್ಲಿಗೇರಿಸಿದ್ದ ಪ್ರಕರಣ; ಮೂವರು ವಶಕ್ಕೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪ್ರತಿಕೃತಿಯನ್ನು ನಡು ರಸ್ತೆ ತಂತಿಗೆ ನೇತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ತೆಗೆದುಕೊಂಡು ಬೆಳಗಾವಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಬೆಳಗಾವಿಯ ಪೋರ್ಟ್ ರಸ್ತೆಯಲ್ಲಿ ನೂಪುರ್ ಶರ್ಮಾ ಪ್ರತಿಕೃತಿಯನ್ನು ಗಲ್ಲಿಗೇರಿಸುವ ಮಾದರಿಯಲ್ಲಿ ತಂತಿಗೆ ನೇತು ಹಾಕಿದ್ದರು. ಮಾರ್ಕೆಟ್ ಠಾಣಾ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದರು. ಇದೀಗ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಡಿಸಿಪಿ ರವೀಂದ್ರ ಗಡಾದಿ ಪ್ರಗತಿವಾಹಿನಿಗೆ ತಿಳಿಸಿದ್ದಾರೆ.

Home add -Advt

PSI ಅಕ್ರಮ; ಮತ್ತೋರ್ವ ಕಾನ್ಸ್ ಟೇಬಲ್ ಬಂಧನ

Related Articles

Back to top button