Belagavi NewsBelgaum News

*ಪಾಗಲ್ ಪ್ರೇಮಿಯನ್ನು ಬಂಧಿಸಲಾಗಿದೆ: ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ತಾಲ್ಲೂಕಿನ ಕಿಣೈ ಗ್ರಾಮದಲ್ಲಿ ಪಾಗಲ್ ಪ್ರೇಮಿ ಹುಚ್ಚಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಿಪ್ಪಣ್ಣ ಡೋಕರೆಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಹೇಳಿದರು.

ಶನಿವಾರ ಬೆಳಗಾವಿಯಲ್ಲಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ವರ್ಷದಿಂದ 21 ವರ್ಷದ ಯುವತಿಗೆ ಪ್ರೀತಿ ಮಾಡುವಂತೆ ಸತಾಯಿಸುತ್ತ ತಿಪ್ಪಣ್ಣ ಡೋಕರೆ (27) ಯನ್ನು ಯುವತಿಯ ದೂರಿನ ಮೇರೆಗೆ ಬಂಧನ ಮಾಡಲಾಗಿದೆ.

Home add -Advt

ಬೆಳಗಾವಿ ಗ್ರಾಮೀಣ ಪೊಲೀಸರಿಂದ ಆರೋಪಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ. ಯುವತಿಗೆ ಸೂಕ್ತ ರಕ್ಷಣೆ ನೀಡುವ ಭರವಸೆಯನ್ನು ಯುವತಿ ಕುಟುಂಬಕ್ಕೆ ನೀಡಲಾಗಿದೆ ಎಂದರು.

ತಿಪ್ಪಣ್ಣ ವಿರುದ್ಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

Related Articles

Back to top button