*ಬೆಳಗಾವಿ: ಮಹಾನಗರ ಪಾಲಿಕೆಯಲ್ಲಿ ಹಲವು ವರ್ಷಗಳಿಂದ ಠಿಕಾಣಿ ಹೂಡಿದ್ದ ಅಧಿಕಾರಿಗಳಿಗೆ ಬಿಗ್ ಶಾಕ್*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಅನೇಕ ವರ್ಷಗಳಿಂದ ಒಂದೆಡೆ ಠಿಕಾಣಿ ಹೂಡಿದ್ದ ಅಧಿಕಾರಿಗಳಿಗೆ ದಿಢೀರ್ ವರ್ಗಾವಣೆ ಠರಾವ್ ಪಾಸ್ ಮಾಡಿ ಮೇಯರ್ ಆದೇಶ ಹೊರಡಿಸಿದ್ದಾರೆ.
1991ರಿಂದ ಬೆಳಗಾವಿ ಪಾಲಿಕೆಯಲ್ಲಿಯೇ ಕೆಲ ಅಧಿಕಾರಿಗಳು ಠಿಕಾಣಿ ಹೂಡಿದ್ದರು. ನಿಯಮದ ಪ್ರಕಾರ ಗ್ರೇಡ್ A, ಗ್ರೇಡ್ B ಹುದ್ದೆ ಅಧಿಕಾರಿಗಳು ಒಂದು ಹುದ್ದೆಯಲ್ಲಿ ಮೂರು ವರ್ಷ ಹಾಗೂ ಗ್ರೇಡ್ C ಅಧಿಕಾರಿಗಳು ನಾಲ್ಕು ವರ್ಷ ಹಾಗೂ ಗ್ರೇಡ್ D ಹುದ್ದೆ ಅಧಿಕಾರಿಗಳು 7 ವರ್ಷ ಇರಬೇಕು. ಆದರೆ ನಿಯಮ ಮೀರಿ ಅಧಿಕಾರಿಗಳು ಒಂದೇ ಹುದ್ದೆಯಲ್ಲಿ ಹಲವು ವರ್ಷಗಳಿಂದ ಇದ್ದರು.
ಒಂದೇ ಕಡೆ ಇರುವ ಅಧಿಕಾರಿಗಳು ತಮ್ಮ ಕೆಲಸದಲ್ಲಿ ಉದಾಸೀನ ತೋರಿಸಿದ್ದಲ್ಲದೇ, ಕೆಲಸದಲ್ಲಿ ನಿರ್ಲಕ್ಷ್ಯ ಮಾಡಿದ್ದಾರೆ. ಇದರಿಂದಾಗಿ ಬೆಳಗಾವಿ ಮಹಾನಗರ ಅಭಿವೃದ್ಧಿ ಕುಂಠಿತವಾಗಿದೆ. ಈ ಹಿನೆಲೆಯಲ್ಲಿ ಹಲವು ವರ್ಷಗಳಿಂದ ಒಂದೇ ಹುದ್ದೆಯಲ್ಲಿದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಪಾಲಿಕೆ ಸದಸ್ಯ ಡಾ.ಶಂಕರಗೌಡ ಪಾಟೀಲ್ ಆಗ್ರಹಿಸಿದ್ದರು.
ಇದೀಗ ಮಹಾನಗರ ಪಾಲಿಕೆ ಸಭೆಯಲ್ಲಿ ಹಲವು ವರ್ಷಗಳಿಂದ ಇದ್ದ ಅಧಿಕಾರಿಗಳನ್ನು ವರ್ಗಾವಣೆಗೆ ಮೇಯರ್ ಶೋಭಾ ಸೋಮನಾಚೆ ಠರಾವ್ ಪಾಸ್ ಮಾಡಿ ಆದೇಶ ಹೊರಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ