Belagavi NewsBelgaum News

*ಬೆಳಗಾವಿ ಡಿಸಿ ಕಚೇರಿ ಬಳಿ ಪಂಚಾಮಸಾಲಿ ಹೋರಾಟಕ್ಕೆ ತಡೆ: ಸರ್ಕಾರದ ವಿರುದ್ಧ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ಕ್ರಮ ಖಂಡಿಸಿ ಹಾಗೂ ಸಿಎಂ ಸಿದ್ದರಾಮಯ್ಯ ಕ್ಷಮೆ ಕೋರುವಂತೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದವರು ಬೆಳಗಾವಿ ಡಿಸಿ ಕಚೇರಿ ಮುಂದೆ ಧರಣಿ ಸತ್ಯಾಗ್ರಹಕ್ಕೆ ಮುಂದಾಗಿದ್ದರು.

ಈ ವೇಳೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪಂಚಮಸಾಲಿ ಹೋರಾಟಕ್ಕೆ ಅವಕಾಶ ನೀಡಿಲ್ಲ. ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನಾ ಧರಣಿಗೆ ಅವಕಶವಿಲ್ಲ ಎಂದಿದ್ದಾರೆ. ಇದರಿಂದ ಹೋರಾಟಗಾರರು ಜಿಲ್ಲಾಡಳಿತ ಹಾಗೂ ಸರ್ಕಾರದ ವಿರುದ್ಧ ಇನ್ನಷ್ಟು ಆಕ್ರೋಶ ವ್ಯಕ್ತಪಡಿಸಿವೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಹೋರಾಟ ತಡೆಯುವುದು ಅವರ ಹವ್ಯಾಸ, ಆದರೆ ಹೋರಾಟ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದರು.

Home add -Advt

ಪಂಚಮಸಾಲಿ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಮಡಿರುವ ಪೊಲೀಸರ ಕ್ರಮ ಖಂದನೀಯ. ಸಿಎಂ ಸಿದ್ದರಾಮಯ್ಯ ಅವರು ಕ್ಷಮೆ ಕೇಳಬೇಕು. ಅಲ್ಲದೇ ಲಾಠಿ ಚಾರ್ಜ್ ಮಾಡಿರುವ ಪೊಲೀಸ್ ಸಿಬ್ಬಂದಿಗಳನ್ನು ಸಸ್ಪೆಂಡ್ ಮಾಡಬೇಕು ಎಂದು ಆಗ್ರಹಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button