
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಿಬಿಐ ಅಧಿಕಾರಿಗಳು ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಯನ್ನು ಬಂಧಿಸಿದ್ದಾರೆ.
ಶಾಂತಿನಗರದ ಇಡಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲಲಿತ್ ಬಜಾಡ್ ಎಂಬುವವರನ್ನು ಸಿಬಿಐ ಬಂಧಿಸಿದೆ.
ಇಡಿ ಅಧಿಕಾರಿ ಲಲಿತ್ ಅವರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ, ಬಳಿಕ ಸಿಬಿಐ ಅಧಿಕಾರಿಗಳು ಅವರನ್ನು ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.