Kannada NewsLatest

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ತಲೆ ಮೇಲೆ ಕಾಲಿಟ್ಟ ಕಿರಾತಕ

 

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಇತ್ತೀಚೆಗೆ ಪೀರಣವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಕುರಿತ ಹೋರಾಟ, ವಿವಾದ ಮರೆಯುವ ಮುನ್ನವೇ ವ್ಯಕ್ತಿಯೊಬ್ಬ ಮತ್ತೊಂದು ಅವಾಂತರ ಸೃಷ್ಟಿಸಿದ್ದಾನೆ.

ಪೀರಣವಾಡಿಯಲ್ಲಿ ಪುನರ್ ನಿರ್ಮಾಣಗೊಂಡಿರುವ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ತಲೆ ಮೇಲೆ ವ್ಯಕ್ತಿಯೊಬ್ಬ ನಿಂತು ಹೊಸ ವಿವಾದ ಸೃಷ್ಟಿಸಿದ್ದಾನೆ. ಈ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು, ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ವ್ಯಕ್ತಿ ಉದ್ದೇಶಪೂರ್ವಕವಾಗಿ ಈ ಕೃತ್ಯವೆಸಗಿದ್ದಾನೋ ಅಥವಾ ಮಾನಸಿಕ ಅಸ್ವಸ್ಥನೋ ಎಂಬುದು ತಿಳಿದುಬಂದಿಲ್ಲ. ಸ್ಥಳದಲ್ಲಿದ್ದವರು ಮರಾಠಿ ಭಾಷೆಯಲ್ಲಿ ಮಾತನಾಡುತ್ತಿರು ಎನ್ನಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button