
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ನೇತೃತ್ವದಲ್ಲಿ ನಡೆಯುತ್ತಿರುವ ಫೋನ್ ಇನ್ ಕಾರ್ಯಕ್ರಮ ಜಿಲ್ಲೆಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಅಲ್ಲದೆ ಜನಸ್ನೇಹಿ ಆಡಳಿತಕ್ಕೆ ಹೆಸರುವಾಸಿಯಾಗಿದೆ. ನಾಳೆ ನಡೆಯಲಿರುಗ 13ನೇ ಫೋನ್ ಇನ್ ಕಾರ್ಯಕ್ರಮ ಇತಿಹಾಸ ಬರೆಯಲಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಡೆಸುತ್ತಿರುವ ಫೋನ್ ಇನ್ ಕಾರ್ಯಕ್ರಮ ಯಶಸ್ವಿಯಾಗಿದ್ದು, ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆ ಮಾಡುತ್ತಿರುವ ಈ ಫೋನ್ ಇನ್ ಕಾರ್ಯಕ್ರಮದಿಂದ ಜಿಲ್ಲೆಯ ಸಾಕಷ್ಟು ಸಮಸ್ಯೆ ಒಂದು ಫೋನ್ ಕರೆಯಿಂದ ಬಗೆ ಹರಿದಿದೆ. ನಾಳೆ ನಡೆಯಲಿರುವ ಫೋನ್ ಇನ್ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಹಾಗೂ ನಗರ ಪೊಲೀಸ್ ಇಲಾಖೆಯ ಡಿಸಿಪಿ ಉಪಸ್ಥಿತಿಯಲ್ಲಿ ನಡೆಯುತ್ತಿರುವುದು ಇತಿಹಾಸ ಸೃಷ್ಟಿಸಲಿದೆ.
ಬೆಳಗಾವಿಯ ಜಿಲ್ಲೆಯಲ್ಲಿ ಅಕ್ರಮ ಸರಾಯಿ, ಮರಳು ಸಾಗಾಟ, ಶಾಲಾ ಆವರಣದಲ್ಲಿ ತಂಬಾಕು, ಮಟ್ಕಾ, ಕೌಂಟುಂಬಿಕ ಸಮಸ್ಯೆ, ಕಳ್ಳತನ ಪ್ರಕರಣ, ಸಂಚಾರ ಸಮಸ್ಯೆಯ ಕುರಿತು ಸಾರ್ವಜನಿಕರು ಎಸ್ಪಿ ಅವರಿಗೆ ಕರೆ ಮಾಡಿ ದೂರಿದ ಹಿನ್ನೆಲೆಯಲ್ಲಿ ತತ್ವರಿತ ರೀತಿಯಲ್ಲಿ ಸ್ಪಂದಿಸಿ ಅದಕ್ಕೆ ಕಡಿವಾಣ ಹಾಕುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ನಾಳೆ ಶನಿವಾರ ನಡೆಯಲಿರುವ 13ನೇ ಫೋನ್ ಇನ್ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ತಂಡ, ನಗರ ಪೊಲೀಸ್ ಇಲಾಖೆಯ ಡಿಸಿಪಿ ನೇತೃತ್ವದಲ್ಲಿ ನಡೆಯುತ್ತಿದೆ. ಸಾರ್ವಜನಿಕರು ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ 0831 2405226ಗೆ ಸಂಪರ್ಕಿಸಿ ಕರೆ ಮಾಡಬಹುದು.
https://pragati.taskdun.com/two-theftsarrestedrecovered-one-tractor-and-motor-cyclebelagavi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ