LatestUncategorized

*ಬೆಳಗಾವಿಗೆ ಪ್ರಧಾನಿ ಮೋದಿ ಭೇಟಿ; ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸಭೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಫೆ.27 ರಂದು ಬೆಳಗಾವಿ ಮತ್ತು ಶಿವಮೊಗ್ಗ ಜಿಲ್ಲೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ಶಿಷ್ಟಾಚಾರ ಪಾಲನೆ ಸೇರಿದಂತೆ ಪ್ರತಿಯೊಂದು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಲು ಅಗತ್ಯವಾದ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೂಚನೆ ನೀಡಿದರು.

ಪ್ರಧಾನಮಂತ್ರಿಗಳ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪೂರ್ವಸಿದ್ಧತೆ ಕುರಿತು ಜಿಲ್ಲೆಯ ಉನ್ನತ ಅಧಿಕಾರಿಗಳ ಜತೆ ವಿಡಿಯೋ ಸಂವಾದ ಮೂಲಕ ಪೂರ್ವಸಿದ್ಧತೆ ಪರಿಶೀಲಿಸಿದರು. ಪ್ರಧಾನಮಂತ್ರಿಗಳ ಕಾರ್ಯಾಲಯದ ನಿರ್ದೇಶನದಂತೆ ಭದ್ರತಾ ವ್ಯವಸ್ಥೆ, ಶಿಷ್ಟಾಚಾರ ಹಾಗೂ ವೇದಿಕೆ ನಿರ್ಮಾಣ ಸೇರಿದಂತೆ ಪ್ರತಿಯೊಂದು ಕೆಲಸವನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದರು.

ಅಂತಿಮ ಕಾರ್ಯಕ್ರಮ ಪಟ್ಟಿಯ ಪ್ರಕಾರ ಕೊನೆಗಳಿಗೆಯಲ್ಲಿ ಕೆಲವು ಮಾರ್ಪಾಡು ಆಗಬಹುದು. ಇದನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಮತ್ತು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ತುರ್ತು ವೈದ್ಯಕೀಯ ಸೌಲಭ್ಯ, ಭದ್ರತೆ ಮತ್ತು ಸಂಚಾರ ನಿರ್ವಹಣೆಗೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ತಿಳಿಸಿದರು.

Home add -Advt

ಪ್ರಧಾನಮಂತ್ರಿಗಳ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿಯ ಪ್ರಕಾರ ಸಂಬAಧಿಸಿದ ಇಲಾಖೆಗಳ ಜತೆ ಚರ್ಚಿಸಿ ಈಗಾಗಲೇ ಕಾರ್ಯಕ್ರಮದ ಸಿದ್ಧತೆಗಳನ್ನು ಆರಂಭಿಸಲಾಗಿದ್ದು, ಪ್ರಧಾಮಂತ್ರಿಗಳ ಕಾರ್ಯಾಲಯ ಹಾಗೂ ಎಸ್.ಪಿ.ಜಿ. ಅಧಿಕಾರಿಗಳ ತಂಡದ ನಿರ್ದೇಶನದ ಅನ್ವಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಪ್ರಾದೇಶಿಕ ಆಯುಕ್ತರಾದ ಎಂ.ಜಿ.ಹಿರೇಮಠ, ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ.ಎಂ.ಎಂ.ಬಿ.ಬೋರಲಿಂಗಯ್ಯ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.

ಇದಾದ ಬಳಿಕ ಜಿಲ್ಲಾಮಟ್ಟದ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಲಿರುವುದರಿಂದ ಪಾರ್ಕಿಂಗ್ ಮತ್ತು ಊಟದ ವ್ಯವಸ್ಥೆ ಸಮರ್ಪಕವಾಗಿ ಕಲ್ಪಿಸಬೇಕಿದೆ ಎಂದರು.

ಇದಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಪ್ರತಿಯೊಬ್ಬ ಅಧಿಕಾರಿಗಳು ತಮಗೆ ವಹಿಸಲಾದ ಜವಾಬ್ದಾರಿಗಳನ್ನು ನಿಭಾಯಿಸಬೇಕು ಎಂದು ಹೇಳಿದರು.

ತುರ್ತು ವೈದ್ಯಕೀಯ ಸೌಲಭ್ಯ, ಶುದ್ಧ ಕುಡಿಯುವ ನೀರು, ಮೊಬೈಲ್ ಶೌಚಾಲಯ ಮತ್ತಿತರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಉಪ ವಿಭಾಗಾಧಿಕಾರಿ ಬಲರಾಮ್ ಚವಾಣ, ಡಿಎಚ್‌ಓ ಡಾ.ಮಹೇಶ್ ಕೋಣಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಾನಂದ ಮಗ್ದುಂ ಮತ್ತಿತರರು ಉಪಸ್ಥಿತರಿದ್ದರು.

*ಈ ಘಟನೆಗೂ ನನಗೂ ಸಂಬಂಧವಿಲ್ಲ: ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ*

https://pragati.taskdun.com/balachandra-jarakiholireactionyoutube-channel-comments/

Related Articles

Back to top button