Belagavi NewsBelgaum News

*ಬೆಳಗಾವಿ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮತ್ತೋರ್ವ ಆರೋಪಿಗೆ 20 ವರ್ಷ ಜೈಲುಶಿಕ್ಷೆ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೋಕ್ಸೋ ನ್ಯಾಯಾಲಯ ಅಪರಾಧಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಸಂತ್ರಸ್ತ ಬಾಲಕಿಯ ತಂದೆ ಕಿತ್ತೂರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಾಲಕಿ ಅಪ್ರಾಪ್ತ ವಯಸ್ಸಿನವಳು ಅಂತಾ ಗೋತ್ತಿದರೂ ದಿನಾಂಕ:- 10-09-2017 ರಂದು ಆರೋಪಿ ಗಂಗಪ್ಪ ಕಲ್ಲಪ್ಪ ಕೋಲಕಾರ ಬಾಲಕಿಯನ್ನು ಪುಸಲಾಯಿಸಿ ಬೈಕ್ ನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ.

ಕಿತ್ತೂರು ಮೂಲದವನೇ ಆದ ಆರೋಪಿ ಬಾಲಕಿಯನ್ನು ಕಿಡ್ನ್ಯಾಪ್ ಮಾಡಿ ಮಹಾರಾಷ್ಟ್ರದ ತಾಸಂಗಾದಲ್ಲಿ ಕಡ್ಡಡವೊಂದರ ನೆಲಮಹಡಿಯ ಸಣ್ಣ ಕೋಣಿಯಲ್ಲಿ ಕೂಡಿಟ್ಟು ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಿತ್ತೂರು ಪೊಲೀಸರು ಆರೋಪಿ ಗಂಗಪ್ಪ ಕಲ್ಲಪ್ಪ ಕೋಲಕಾರನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡಿದ್ದ.

ತನಿಖಾಧಿಕಾರಿ ರಾಘವೇಂದ್ರ ಬ ಹವಲದಾರ ಹೆಚ್ಚುವರಿ ಜಿಲ್ಲಾ & ಸತ್ರ ನ್ಯಾಯಾಲಯ ವಿಶೇಷ ಶೀಘ್ರಗತಿ ಪೋಕ್ಸೋ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆರೋಪಿಯ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾ.ಸಿ ಎಮ್ ಪುಷ್ಪಲತಾ ಅವರು, ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

Home add -Advt

20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ 10.000/- ರೂಪಾಯಿ ದಂಡ ವಿಧಿಸಲಾಗಿದ್ದು, ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 1 ಲಕ್ಷ ಪರಿಹಾರ ಧನವನ್ನು ಪಡೆಯಲು ನ್ಯಾಯಾಲಯ ಆದೇಶಸಿರುತ್ತದೆ. ಪ್ರಕರಣದಲ್ಲಿ ಸರಕಾರದ ಪರವಾಗಿ ಬೆಳಗಾವಿ ವಿಶೇಷ ಸರ್ಕಾರಿ ಅಭಿಯೋಜಕರು ಎಲ್. ವಿ ಪಾಟೀಲ ವಾದ ಮಂಡಿಸಿದ್ದರು.


Related Articles

Back to top button