Cancer Hospital 2
Beereshwara 36
LaxmiTai 5

*ಬೆಳಗಾವಿ: ಅಕ್ರಮವಾಗಿ ಸಾಗಿಸುತ್ತಿದ್ದ 48 ಕ್ವಿಂಟಾಲ್ ಗೂ ಅಧಿಕ ಅಕ್ಕಿ ಜಪ್ತಿ*

Anvekar 3

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಅಕ್ರಮವಾಗಿ ಅಕ್ಕಿ ಸಾಗಿಸುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು 48 ಕ್ವಿಂಟಲ್ 90 ಕೆಜಿ ಅಕ್ರಮ ಅಕ್ಕಿ ಜಪ್ತಿ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಬ್ರಹ್ಮನಗರದ ಮಾರುತಿ ಮಂದಿರ ಬಳಿ ದೇವರಾಜ ಬಾಳಪ್ಪ ಬಾಳೆಕುಂದ್ರಿ (23) ಎಂಬುವವರು ತಮ್ಮ ಸ್ವಂತ ಲಾಭಕ್ಕಾಗಿ ಆಹಾರ ಇಲಾಖೆಯಿಂದ ಪಡಿತರರಿಗೆ ವಿತರಿಸುವ ಪಡಿತರ ಅಕ್ಕಿಯನ್ನು ತಂದು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಟಾಟಾ ಕಂಪನಿಯ ಗೂಡ್ಸ್ ವಾಹನದಲ್ಲಿ ಅಕ್ಕಿ ಸಾಗಿಸುತ್ತಿದ್ದಾಗ ದಾಳಿ ನಡೆಸಲಾಗಿದ್ದು, ಆರೋಪಿ ಬಾಳೆಕುಂದ್ರಿಯಿಂದ 1,71,150 ರೂಪಾಯಿ ಮೌಲ್ಯದ 48 ಕ್ವಿಂಟಲ್ 90 ಕೆಜಿ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.

Emergency Service

ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ದಾಳಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಬೆಳಗಾವಿ ಉದ್ಯಮಭಾಗ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿಯ ಕಾರ್ಯವನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿದ್ದಾರೆ.


Bottom Add3
Bottom Ad 2