
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸುತ್ತಿದ್ದಂತೆ ಪೊಲೀಸರಿಂದ ತಪ್ಪಿಸಿಕೊಳ್ಳುವ ಸಲುವಾಗಿ 6 ಜನರು ನದಿಗೆ ಹಾರಿದ್ದು, ಅವರಲ್ಲಿ ಇಬ್ಬರು ನಾಪತ್ತೆಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ರಾಮದುರ್ಗದ ಹೊರವಲಯದಲ್ಲಿ ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸರ ದಾಳಿಯಿಂದ ಭಯಗೊಂಡ 6 ಯುವಕರು ಮಲಪ್ರಭಾ ನದಿಗೆ ಹಾರಿದ್ದಾರೆ. ಇವರಲ್ಲಿ ನಾಲ್ವರು ಈಜಿ ದಡ ಸೇರಿದ್ದರೆ ಉಳಿದ ಇಬ್ಬರು ನಪತ್ತೆಯಾಗಿದ್ದಾರೆ ಎನ್ನಲಾಗಿದೆ.
ನಾಪತ್ತೆಯಾದವರನ್ನು ಮಂಜು ಹಾಗೂ ಸಮೀರ್ ಎಂದು ಗುರುತಿಸಲಾಗಿದ್ದು, ನದಿಗೆ ಹಾರಿದವರ ಪತ್ತೆಗೆ ಶೋಧ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ