
ಪ್ರಗತಿವಾಹಿನಿ ಸುದ್ದಿ; ಧಾರವಾಡ: ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿಯಿಂದ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುತಾಲಿಕ್, ಈಗಾಗಾಲೇ ಬಿಜೆಪಿ ನಾಯಕರ ಜೊತೆ ಮೂರು ಸುತ್ತಿನ ಮಾತುಕತೆ ನಡೆಸಲಾಗಿದೆ. ನಾಯಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜಕಾರಣದಲ್ಲಿ ಜಾತಿ, ಹಣ ಎಲ್ಲ ಇರುವುದರಿಂದ ಶೇ.80ರಷ್ಟು ನನಗೇ ಟಿಕೆಟ್ ಸಿಗುವ ಭರವಸೆ ಇದೆ ಎಂದರು.
ಒಂದು ವೇಳೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಪಕ್ಷ ಯಾರಿಗೆ ಟಿಕೆಟ್ ನೀಡುತ್ತೋ ಅವರ ಪರ ಕೆಲಸ ಮಾಡುತ್ತೇನೆ. ಕಳೆದ 40 ವರ್ಷಗಳಿಂದ ಹಿಂದುತ್ವದ ಪರ ಕೆಲಸಮಾಡಿದ್ದು, ಸೇವೆ ಮಾಡಲು ಪಕ್ಷ ಅವಕಾಶ ನೀಡಬೇಕು ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ