CrimeKarnataka NewsLatestPolitics

*ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರ್ ನಿಂದ ಹಲ್ಲೆ: ಮಾತುಕತೆಗೆಂದು ಕರೆದು ದುಷ್ಕರ್ಮಿಗಳಿಂದ ಕೃತ್ಯ*

ಪ್ರಗತಿವಾಹಿನಿ ಸುದ್ದಿ: ಮಾತುಕತೆಗೆ ಬರಬೇಕೆಂದು ಕರೆಸಿಕೊಂಡು, ದುಷ್ಕರ್ಮಿಗಳು ಯುವ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರ್ ನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಉಡುಪಿ ನಗರದ ಪಿಪಿಸಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಕಾಂಗ್ರೆಸ್ ಮುಖಂಡ ಶರತ್ ಕುಂದರ್ ಹಲ್ಲೆಗೊಳಗಾದವರು. 6-7 ಜನ ದುಷ್ಕರ್ಮಿಗಳು ಥಾರ್ ಜೀಪ್ ನಲ್ಲಿ ಬಂದು ಹಲ್ಲೆ ನಡೆಸಿದ್ದಾರೆ.

Home add -Advt

ಮಣಿಪಾಲ್ ಹೋಟೆಲ್ ನಲ್ಲಿ ನಡೆದಿದ್ದ ಗಲಾಟೆ ಪ್ರಕರಣದ ವಿಚಾರವಾಗಿ ಮಾತುಕತೆಗೆಂದು ಕರೆಸಿ ಶರತ್ ಕುಂದರ್ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.


Related Articles

Back to top button