Kannada NewsKarnataka NewsPolitics

*ಜೈಲಿನಿಂದ ಹೊರ ಬರುತ್ತಿದ್ದಂತೆ ಟೆಂಪಲ್ ರನ್ ನಡೆಸಿದ ಶಾಸಕ ಚಂದ್ರು ಲಮಾಣಿ*

ಪ್ರಗತಿವಾಹಿನಿ ಸುದ್ದಿ: ಲಂಚ ಸ್ವೀಕರಿಸಿದ ಆರೋಪದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರಿಗೆ ಜಾಮೀನು (Bail) ದೊರೆತಿದ್ದು, ಜೈಲಿನಿಂದ ಬಿಡುಗಡೆ ಆಗುತ್ತಿದ್ದಂತೆ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಮಾಡಿದರು.

5 ಲಕ್ಷ ರೂ. ಲಂಚ ಪಡೆದ ಆರೋಪದ ಹಿನ್ನೆಲೆ ಬಂಧನಕ್ಕೊಳಗಾದ ಚಂದ್ರು ಲಮಾಣಿ ಕಳೆದ 15 ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2 ಲಕ್ಷ ರೂ. ಬಾಂಡ್ ಹಾಗೂ ಇಬ್ಬರು ಶೂರಿಟಿಗಳ ಶರತ್ತಿನ ಮೇಲೆ ಅವರಿಗೆ ಜಾಮೀನು ಮಂಜೂರು ಮಾಡಿತ್ತು.

ನ್ಯಾಯಾಲಯದ ಆದೇಶದಂತೆ ಅಗತ್ಯ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಅವರು ಜೈಲಿನಿಂದ ಹೊರಬಂದಿದ್ದಾರೆ. ಜೈಲಿನಿಂದ ಬಿಡುಗಡೆಯಾದ ನಂತರ ಅವರ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿತು.

ಕ್ಷೇತ್ರದ ವಿವಿಧ ಭಾಗಗಳಿಂದ ಆಗಮಿಸಿದ್ದ ಅಭಿಮಾನಿಗಳು ತಮ್ಮ ನೆಚ್ಚಿನ ಶಾಸಕರನ್ನು ಸ್ವಾಗತಿಸಿದರು. ಬಿಡುಗಡೆಗೊಂಡ ಬಳಿಕ ಚಂದ್ರು ಲಮಾಣಿ ಚೆಕ್‌ಪೋಸ್ಟ್ ಸಮೀಪದ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಈಡುಗಾಯಿ ಹೊಡೆದು ದೇವರ ದರ್ಶನ ಪಡೆದರು.

Related Articles

Back to top button