
ಪ್ರಗತಿವಾಹಿನಿ ಸುದ್ದಿ: ಮಕ್ಕಳ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಕೇಳಿದ್ದಕ್ಕೆ ಪಿಎಸ್ಐ ಓರ್ವ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೇಳಿಬಂದಿದೆ.
ಪಿಎಸ್ಐ ಒಬ್ಬರು ಪತ್ನಿಯ ಮೇಲೆ ಹಲ್ಲೆ ನಡೆಸಿರುವ ಆರೋಪ ಎದುರಿಸುತ್ತಿದ್ದಾರೆ. ಪತಿಯಿಂದ ಹಲ್ಲೆಗೊಳಗಾದ ಪತ್ನಿ ಗಂಭೀರವಾಗಿ ಗಾಯಗೊಂಡು ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವರ ಕಣ್ಣು, ಕುತ್ತಿಗೆ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಪಿಎಸ್ಐ ಯುವತಿ ಜೊತೆ ಅಕ್ರಮ ಸಂಬಂಧ ಹೊಂದಿರುವ ಆರೋಪವೂ ಕೇಳಿಬಂದಿದೆ. ಈ ಹಿಂದೆಯೂ ಅವರು ಪತ್ನಿ ಮೇಲೆ ಹಲ್ಲೆ ನಡೆಸಿದ್ದ ಆರೋಪವಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ನ್ಯಾಯಾಲಯದ ಸೂಚನೆಯಂತೆ ಪತ್ನಿ ಬೆಳಗಾವಿಗೆ ಬಂದು ವಾಸವಾಗಿದ್ದರು.
ಮಕ್ಕಳ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಕೇಳಿದ್ದಕ್ಕೆ ಪಿಎಸ್ಐ, ಪತ್ನಿಯನ್ನು ಮನಬಂದಂತೆ ಥಳಿಸಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ