Belagavi NewsBelgaum NewsKannada NewsKarnataka NewsLatest
*ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಪರೀಕ್ಷೆಗೆ ತೆರಳಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಭೂಮಿಕಾ ಮಾಳಂಗಿ (17) ಮೃತ ವಿದ್ಯಾರ್ಥಿನಿ. ಇಂದು ಬೆಳಿಗ್ಗೆ ಉತ್ಸಾಹದಿಂದಲೇ ಪರೀಕ್ಷೆ ಬರೆಯಲು ರೆಡಿಯಾಗುತ್ತಿದ್ದಳು. ಪರೀಕ್ಷಾ ಕೇಂದ್ರಕ್ಕೆ ತೆರಳು ಮನೆಯಿಂದ ಹೊರಬರುತ್ತಿದ್ದಂತೆಯೇ ಹಠಾತ್ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾಳೆ.
ತಕ್ಷಣ ಪೋಷಕರು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಿ ಮಾರ್ಗ ಮಧ್ಯೆಯೇ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ.


