
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದ್ದು, ವರುಣಾರ್ಭಟಕ್ಕೆ ಕೆರೆ ಕೋಡಿ ಬಿದ್ದು ಗ್ರಾಮಗಳು, ದೇವಾಲಗಳು, ರಸ್ತೆಗಳು ಜಲಾವೃತಗೊಂಡು ಮತ್ತೆ ಅವಾಂತರಗಳು ಸೃಷ್ಟಿಯಾಗುತ್ತಿವೆ.
ಬೆಳಗಾವಿಯಲ್ಲಿ ಭಾರಿ ಮಳೆಯಿಂದಾಗಿ ಅಥಣಿ ತಾಲೂಕಿನ ಐಹಾಸಿಕ ಕೊಕಟನೂರು ಎಲ್ಲಮ್ಮ ದೇವಿ ದೇವಸ್ಥಾನ ಜಲಾವೃತಗೊಂಡಿದೆ. ಅಥಣಿ ಸುತ್ತಮುತ್ತ ಗ್ರಾಮಗಳಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಜಿಲ್ಲೆಯ ಹಲವೆಡೆಗಳಲ್ಲಿ ಅವಘಡಗಳು ಸಂಭವಿಸುವೆ.
ಇನ್ನು ರಾತ್ರಿ ಸುರಿದ ಧಾರಾಕಾರ ಮಳೆಗೆ ಹುಬ್ಬಳ್ಳಿ-ಧಾರವಾಡ ಜಿಲ್ಲೆ ತತ್ತರಗೊಂಡಿದ್ದು, ಮನೆ, ದೇವಸ್ಥಾನ, ಅಂಗಡಿಗಳಿಗೆ ನೀರು ನುಗ್ಗಿವೆ. ದಾಜೀಬಾನ್ ಪೇಟೆ, ಕಮರಿಪೇಟೆ ಭಾಗದಲ್ಲಿ ಹಾನಿಯುಂತಾಗಿದ್ದು, ಮಳೆ ನೀರು ಮನೆಗಳಿಗೆ ಉಗ್ಗಿರುವುದರಿಂದ ನೀರು ಹೊರಹಾಕಲು ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.
ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ
https://pragati.taskdun.com/latest/karnatakarain-updateheavy-rain/
ಸಿಎಂ ಬೊಮ್ಮಾಯಿ ಭೇಟಿಯಾದ ನಟ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ