Belagavi NewsBelgaum NewsKannada NewsKarnataka NewsLatest
*ಭಾರಿ ಮಳೆ: ಕೃಷ್ಣಾನದಲ್ಲಿಯಲ್ಲಿ ಒಳಹರಿವು ಹೆಚ್ಚಳ; ಚಿಕ್ಕೋಡಿ ನಿಪ್ಪಾಣಿಯಲ್ಲಿ 7 ಸೇತುವೆಗಳು ಮುಳುಗಡೆ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪಶ್ಚಿಮ ಘಟ್ಟ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕೃಷ್ಣಾನದಿಯಲ್ಲಿ ಒಳಹರಿವು ಹೆಚ್ಚಾಗಿದ್ದು, ಬೆಳಗಾವಿಯ ಹಲವೆಡೆ ಪ್ರವಾಹ ಭೀತಿ ಎದುರಾಗಿದೆ.
ದೂಧ್ ಗಂಗಾ ಸಾಗರದಿಂದ ಕೃಷ್ಣಾನದಿಗೆ ಭಾರಿ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದೆ. ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ನೀರು ಹರಿ ಬಿಡಲಾಗುತಿದೆ. ಈಗಗಾಲೇ 65ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ರಾಜಾಪುರ ಬ್ಯಾರೇಜ್ ನಿಂದ 49,500 ಕ್ಯೂಸೆಕ್ ನೀರು ಬಿಡಲಾಗಿದೆ. ಇದರಿಂದಾಗಿ ಕೃಷ್ಣಾನದಿ ತೀರದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ.
ಚಿಕ್ಕೋಡಿ, ನಿಪ್ಪಾಣಿ ಭಾಗದಲ್ಲಿ 7 ಕೆಳಹಂತದ ಸೇತುವೆಗಳು ಮುಳುಗಡೆಯಾಗಿವೆ. ಈ ಭಾಗದ ಹಲು ಪ್ರದೇಶಗಳಿಗೆ ಸಂಪರ್ಕ ಕಡಿತಗೊಂಡಿದೆ.
ಇನ್ನೊಂದೆಡೆ ಘಟಪ್ರಭಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಗೋಕಾಕ್-ಶಿಂಗಳಾಪುರ ಸೇತುವೆ ಜಲಾವೃತವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ