ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಬೆಳಗಾವಿ, ಉತ್ತರ ಕರ್ನಾಟಕ, ಕರಾವಳಿ ಜಿಲ್ಲೆಗಳಲ್ಲಿ ಒಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದ್ದು, ನನದಿಗಳು ಅಪಾಯದಮಟ್ಟ ಮೀರಿ ಹರಿಯುತ್ತಿದ್ದು, ಗ್ರಾಮಗಳಳು ಜಲಾವೃತಗೊಂಡಿವೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಕೃಷ್ಣಾ ನದಿ ಒಳಹರಿವು ಹೆಚ್ಚುತ್ತಿದ್ದು, ಕ್ಷಣ ಕ್ಷಣಕ್ಕೂ ಪ್ರವಾಹ ಭೀತಿ ಎದುರಾಗಿದೆ. 1 ಲಕ್ಷ ಕ್ಯೂಸೆಕ್ ಒಳಹರಿವು ಹೆಚ್ಚುತ್ತಿದೆ. ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ.
ನಿಪ್ಪಾಣಿ ತಾಲೂಕಿನ ಕೂರ್ಣಿ ಗ್ರಾಮದ ಸುತ್ತ ನದಿ ನೀರು ನಿಂತಿದ್ದು, ಹಲವು ಮನೆಗಳು ಮುಳುಗಡೆಯಾಗಿವೆ. ಪರಿಣಾಮ ಕಳೆದ ಮೂರ್ನಾಲ್ಕು ದಿನಗಳಿಂದ ಮನೆಯಿಂದ ಹೊರಬರಲಾಗದೇ ರಕ್ಷಣೆಗಾಗಿ ಕಾಯುತ್ತಿದ್ದ 50 ಜನರನ್ನು ಎಸ್ ಡಿಆರ್ ಎಫ್ ತಂಡ ರಕ್ಷಣೆ ಮಾಡಿದ್ದು, ಬೇರೆಡೆಗೆ ಸ್ಥಳಾಂತರ ಮಾಡಿದೆ.
ಇನ್ನು ಜಿಲ್ಲೆಯ ನಿಪ್ಪಾಣಿ ತಾಲೂಕಿನಲ್ಲಿ ವೇದಗಂಗಾ ನದಿ ಪ್ರವಾಹದಿಂದಾಗಿ ಕೋಡಣಿ ಗ್ರಾಮ ಸಂಪೂರ್ಣ ಜಲಾವೃತಗೊಂಡಿದ್ದು, ಸಾವಿರಾರು ಮನೆಗಳು ನೀರಿನಲ್ಲಿ ಮುಳುಗಿವೆ. ಸುತ್ತಮುತ್ತಲಿನ ಸೇತುವೆಗಳು ಮುಳುಗಡೆಯಾಗಿರುವುದರಿಂದ ಗ್ರಮಕ್ಕೆ ಸಂಪರ್ಕ ಕ್ಅಲ್ಪಿಸುವುದೂ ಕಷ್ಟಕರವಾಗಿದೆ. ಈ ಹಿನ್ನೆಲೆಯಲ್ಲಿ ಎನ್ ಡಿ ಆರ್ ಎಫ್ ಹಾಗೂ ಜಿಲ್ಲಾ ಪೊಲೀಸರು ಗ್ರಾಮಸ್ಥರ ರಕ್ಷಣಾಕಾರ್ಯಕ್ಕೆ ಮುಂದಾಗಿದ್ದು, ಬೋಟ್ ಗಳ ಸಹಾಯದಿಂದ ಗ್ರಾಮಸ್ಥರನ್ನು ಸ್ಥಳಾಂತರಿಸಲಾಗುತ್ತಿದೆ.
ಪಂಡರಿ ನದಿಯಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಲೋಂಡಾ ಪೊಲೀಸರು ರಕ್ಷಿಸಿದ್ದಾರೆ. ಗೋಕಾಕ ಕುಂದರಗಿಯ ಕಾಡುಸಿದ್ದೇಶ್ವರ ಮಠ ಜಲಾವೃತವಾಗಿದ್ದು, ಸ್ವಾಮಿಗಳನ್ನು ರಕ್ಷಿಸಲಾಗಿದೆ.
ಭೀಕರ ಭೂಕುಸಿತ; 36 ಜನರು ದುರ್ಮರಣ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ