ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಕೇವಲ 15 ದಿನಗಳಲ್ಲಿ ಒಂದೇ ಗ್ರಾಮದಲ್ಲಿ ಬರೋಬ್ಬರಿ 45 ಜನರು ಕೊರೊನಾಗೆ ಬಲಿಯಾಗಿದ್ದಾರೆ ಎನ್ನಲಾಗುತ್ತಿದೆ.
ಬೆಳಗಾವಿ ಜಿಲ್ಲೆಯ ರಾಜಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕೊರೊನಾ ಸೋಂಕಿನಿಂದ ಬಳಲುತಿದ್ದ 35 ಜನರು ಆಕ್ಸಿಜನ್ ಕೊರತೆ, ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಮನೆಯಲ್ಲಿಯೇ ಸಾವನ್ನಪ್ಪಿದರೆ, 10 ಜನರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ರಾಜಾಪುರ ಗ್ರಾಮದ ಪ್ರತಿ ಮನೆಯಲ್ಲಿಯೂ ಜ್ವರದಿಂದ ಬಳಲುತ್ತಿದ್ದಾರೆ ಎನ್ನಲಾಗಿದ್ದು, ಗ್ರಾಮದ ಜನರು ಕೊರೊನಾ ಸೋಂಕಿಗೆ ಬಲಿಯಾಗುತ್ತಿದ್ದರೂ ಈವರೆಗೂ ಯಾವೊಬ್ಬ ಆರೋಗ್ಯಾಧಿಕಾರಿಯಾಗಲಿ, ತಹಶೀಲ್ದಾರ್ ಆಗಲಿ ಗ್ರಾಮಕ್ಕೆ ಭೇಟಿ ನೀಡಿಲ್ಲ ಎಂದು ಆರೋಪಿಸಲಾಗಿದ್ದು, ಜಿಲ್ಲಾಡಳಿತ ಕೂಡ ಗ್ರಾಮದ ಜನರ ಆರೋಗ್ಯದ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೈಟ್ ಫಂಗಸ್ ಎಂಬ ಮತ್ತೊಂದು ಅಪಾಯಕಾರಿ ಸೋಂಕು ಪತ್ತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ