Belagavi NewsBelgaum NewsKannada NewsKarnataka NewsLatest

*ಕೃಷಿ ಪತ್ತಿನ ಸಹಕಾರಿ ಸಂಘದ ಕಿಟಕಿ ಮುರಿದು ಕಳ್ಳತನ; 5 ಲಕ್ಷ ದೋಚಿ ಎಸ್ಕೇಪ್ ಆದ ಕಳ್ಳರು*

ಪ್ರಗತಿವಾಹಿನಿ ಸುದ್ದಿ; ರಾಮದುರ್ಗ: ರಾಮದುರ್ಗದ ಕಟಕೋಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಹಿಂಬದಿಯ ಕಿಟಕಿ ಮುರಿದು ಒಳಗೆ ನುಗ್ಗಿರುವ ಕಳ್ಳರು ತ್ರಿಜೋರಿಯಲ್ಲಿದ್ದ 5 ಲಕ್ಷ ನಗದು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.

ಬೆಳಿಗ್ಗೆ ಸಿಬ್ಬಂದಿ ಸಂಘದ ಕಚೇರಿಗೆ ಬಂದಾಗಲೇ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಕಟಕೋಳ ಪೊಲೀಸ್‌ಠಾಣೆಗೆ ಸಿಬ್ಬಂದಿಗಳು ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಬೆಳಗಾವಿಯಿಂದ ಸ್ವಾನದಳ, ಬೆರಳಚ್ಚು ತಜ್ಞರ ತಂಡ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದೆ. ಬೆಳಗಾವಿಯ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ವೇಣುಗೋಪಾಲ, ಡಿಎಸ್‌ಪಿ ರಾಮನಗೌಡ ಹಟ್ಟಿ, ಸಿಪಿಐ ಈರಣ್ಣ ಪಟ್ಟಣಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Home add -Advt

ಕಟಕೋಳ ಠಾಣೆಯಲ್ಲಿ ಪಿಎಸ್‌ಐ ಸಿದ್ರಾಮಪ್ಪ ಉನ್ನದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button