ಮದ್ಯ ನಿಷೇಧಕ್ಕೆ ನನ್ನ ಬೆಂಬಲವಿದೆ ಎಂದ ಸಚಿವ ರಮೇಶ್ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿ ಸಂಪೂರ್ಣವಾಗಿ ಮದ್ಯ ನಿಷೇಧ ಮಾಡಲು ಮೊದಲು ನಾನೇ ಬೆಂಬಲ ಸೂಚಿಸುತ್ತೇನೆ ಎಂದು ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಕೊರೊನಾ ಸೊಂಕು ಹೆಚ್ಚಿದ ಹಿನ್ನೆಲೆಯಲ್ಲಿ ಅಥಣಿ ಪಟ್ಟಣದಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಕೊರೋನಾ ರೋಗ ಬಂದು ಜನರಿಗೆ ಒಳ್ಳೆಯ ದಾರಿ ತೋರಿಸಿದೆ. ಕೆಟ್ಟ ಚಟಗಳನ್ನ ಕಡಿಮೆ ಮಾಡಲು ಇದೊಂದು ಅವಕಾಶ. ಮದ್ಯದಿಂದ ಬಡವರು ಹಾಳಾಗುತ್ತಾರೆ ಹೊರತು ಶ್ರೀಮಂತರಲ್ಲ. ಲಾಕ್‍ಡೌನ್‍ನಿಂದ ಮದ್ಯ ಸಿಗದ ಕಾರಣ ಗ್ರಾಮೀಣ ಭಾಗದ ಮಹಿಳೆಯರು ಸಂತಸದಿಂದ ಇದ್ದಾರೆ. ಹೀಗಾಗಿ ಮದ್ಯ ಬಂದ್ ಮಾಡಬೇಕು ಎನ್ನುವುದು ನನ್ನ ಅಭಿಪ್ರಾಯ ಎಂದರು.

ಇನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಕೊರೊನಾ ಶಂಕಿತ ಡಾನ್ಸ್ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಜಾರಕಿಹೊಳಿ, ಆತನ ವರದಿ ಕೊರೊನಾ ನೆಗೆಟಿವ್ ಬಂದಿದೆ. ಹಾಗಾಗಿ ಖುಷಿಯಿಂದ ಡಾನ್ಸ್ ಮಾಡಿದ್ದಾನೆ ಎಂದು ಸ್ಪಷ್ಟನೆ ನೀಡಿದರು.

Home add -Advt

Related Articles

Back to top button