
ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ನನ್ನ ರಾಜಕೀಯ ಜೀವನದ ಕೊನೆಯವರೆಗೂ ನಾನು ಬಿಜೆಪಿಯಲ್ಲಿಯೇ ಇರುತ್ತೇನೆ. ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಪಕ್ಷ ತೊರೆಯುತ್ತಿದ್ದಾರೆ ಎಂಬ ಊಹಾಪೋಹಗಳಿಗೆ ಸಚಿವ ರಮೇಶ್ ಜಾರಕಿಹೊಳಿ ತೆರೆ ಎಳೆದಿದ್ದು, ಸಂಘ ಪರಿವಾರದಲ್ಲಿ ನನಗೆ ಸಿಗುತ್ತಿರುವ ಆಶೀರ್ವಾದವನ್ನ ಕೆಲ ವೈರಿ ಕುತಂತ್ರಿಗಳಿಗೆ ನೋಡಲು ಆಗುತ್ತಿಲ್ಲ. ಹೀಗಾಗಿ ನಾನು ಪಕ್ಷ ಬಿಡುತ್ತೇನೆ ಎಂಬ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಗುಡುಗಿದ್ದಾರೆ.
ನನ್ನ ರಾಜಕೀಯ ಜೀವನ ಇರುವವರೆಗೆ ನಾನು ಬಿಜೆಪಿ ಪಕ್ಷದಲ್ಲಿ ಇರುತ್ತೇನೆ. ನನ್ನ ರಾಜಕೀಯ ಜೀವನ ಬಿಜೆಪಿ ಪಕ್ಷದಲ್ಲಿಯೇ ಅಂತ್ಯವಾಗುತ್ತೆ. ಸಿಎಂ ಯಡಿಯೂರಪ್ಪ ಬದಲಾವಣೆ ಆಗುತ್ತಾರೆ ಎಂಬುವುದು ಸತ್ಯಕ್ಕೆ ದೂರವಾದುದು. ದೇಶದಲ್ಲಿಯೇ ದಕ್ಷತೆಯಿಂದ ಯುವಕರಂತೆ ಯಡಿಯೂರಪ್ಪನವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಅವರನ್ನ ಬದಲಾವಣೆ ಮಾಡುವ ಪ್ರಮೇಯವೇ ಇಲ್ಲ ಎಂದರು.
ಇನ್ನು ಮುಂಬರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕತ್ತಿ ಸಹೋದರರು ಹಾಗೂ ಬಾಲಚಂದ್ರ ಜಾರಕಿಹೊಳಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ