Latest

ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್

ನಮ್ಮ ಟೀಂ ನಲ್ಲಿ ಇನ್ನೂ ಐವರಿಗೆ ಸಚಿವ ಸ್ಥಾನ ಸಿಗಬೇಕು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನಮ್ಮ ಟೀಂ ನ ಇನ್ನೂ ಹಲವರಿಗೆ ಸಚಿವ ಸ್ಥಾನ ಸಿಗಬೇಕಿದೆ. ಮಾರ್ಚ್-ಏಪ್ರಿಲ್ ನಲ್ಲಿ ದೊಡ್ಡ ಮಟ್ಟದಲ್ಲಿ ಸಂಪುಟ ಪುನರಚನೆಯಾಗಲಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಬಾಂಬ್ ಸಿಡಿಸಿದ್ದಾರೆ.

ಈಗ ಸಚಿವ ಸ್ಥಾನ ಕೈತಪ್ಪಿದವರಿಗೆ ಆಗ ಸ್ಥಾನ ಸಿಗುವ ವಿಶ್ವಾಸವಿದೆ ಎಂದೂ ತಿಳಿಸಿದ್ದಾರೆ.

Home add -Advt

ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಜಾರಕಿಹೊಳಿ, ಇಂದು 7 ಶಾಸಕರು ಸಚಿವರಾಗಿ ಪದಗ್ರಹಣ ಮಾಡಲಿದ್ದು, ಮಾರ್ಚ್-ಏಪ್ರಿಲ್ಲ್ ನಲ್ಲಿ ನಡೆಯಲಿರುವ ಸಂಪುಟ ಪುನಾರಚನೆಯಲ್ಲಿ ಇಂದು ಸಚಿವ ಸ್ಥಾನ ಕೈತಪ್ಪಿದವರಿಗೆ ಅಂದು ಸಿಗಲಿದೆ. ಬೆಳಗಾವಿ, ಬಸವಕಲ್ಯಾಣ, ಮಸ್ಕಿ ಉಪಚುನಾವಣೆ ಮುಗಿದ ಬಳಿಕ ಮತ್ತೊಮ್ಮೆ ಸಂಪುಟ ಪುನಾರಚನೆಯಾಗಲಿದೆ ಎಂದಿದ್ದಾರೆ.

ನಮ್ಮ ಟೀಂ ನಲ್ಲಿ ಇನ್ನೂ ಐವರಿಗೆ ಸಚಿವ ಸ್ಥಾನ ಸಿಗಬೇಕು. ಹೆಚ್.ವಿಶ್ವನಾಥ್, ಮಹೇಶ್ ಕುಮಟಳ್ಳಿ, ಮುನಿರತ್ನ, ಗುಲ್ಬರ್ಗಾದಲ್ಲಿ ಪಕ್ಷ ಕಟ್ಟಿ ದೊಡ್ಡ ವ್ಯಕ್ತಿ ಸೋಲಿಸಿದವರು ಮಾಲೀಕಯ್ಯ ಗುತ್ತೇದಾರ್ ಅವರಿಗೂ ಸಚಿವ ಸ್ಥಾನ ಸಿಗಬೇಕು ಎಂದರು.

ಇನ್ನು ಬಿಜೆಪಿ ಸರ್ಕಾರ ರಚನೆಯಲ್ಲಿ ಸಿ.ಪಿ.ಯೋಗೇಶ್ವರ್ ಪಾತ್ರವೂ ಪ್ರಮುಖವಾಗಿದೆ. ಹಾಗಾಗಿ ಯೋಗೇಶ್ವರ್ ಗೆ ಸಚಿವ ಸ್ಥಾನ ಸಿಕ್ಕಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ.

Related Articles

Back to top button