Kannada NewsLatest

ಗಾಂಧಿ ಮತ್ತು ಶಾಸ್ತ್ರಿ ಅವರ ತ್ಯಾಗ ಬಲಿದಾನ ಸ್ಮರಿಸಿದ ಸಚಿವ ಜಾರಕಿಹೊಳಿ‌

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಸತ್ಯ ಮತ್ತು ಅಹಿಂಸೆ ಎಂಬ ಅಸ್ತ್ರಗಳ ಮೂಲಕ ಭಾರತ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ್ದರು. ಅವರ ಪರಿಕಲ್ಪನೆಯ ಗ್ರಾಮಸ್ವರಾಜ್ಯ ಮತ್ತು ಸ್ವದೇಶಿ ಆರ್ಥಿಕ ವ್ಯವಸ್ಥೆಯ ಗುರಿ ಸಾಧಿಸುವ ಮೂಲಕ ಗಾಂಧಿಯವರನ್ನು ಸ್ಮರಿಸಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಕರೆ ನೀಡಿದರು.

ಗೋಕಾಕ್ ನ‌ ಜಲಸಂಪನ್ಮೂಲ ಸಚಿವರ ಕಚೇರಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಕೇವಲ 17 ತಿಂಗಳ ಕಾಲ ಭಾರತದ ಪ್ರಧಾನ ಮಂತ್ರಿಗಳಾಗಿ ಕೆಲಸ ಮಾಡಿದ್ದರೂ, ನಮ್ಮೆಲ್ಲರ ಹೃದಯದಲ್ಲಿ ಅಜರಾಮರರಾಗಿದ್ದಾರೆ. ಧೃಡ ನಿಲುವಿಗೆ ಮತ್ತೊಂದು ಹೆಸರೇ ಶಾಸ್ತ್ರಿ ಎಂದು, ಸಚಿವರು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರನ್ನು ಸ್ಮರಿಸಿದರು.

ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಯೋಜಿಸಲಾಗಿದ್ದ ಈ‌ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button