Kannada NewsLatest

ಪರಿಷತ್ ಚುನಾವಣೆಗೂ 4 ದಿನ ಮೊದಲು ರಾಜಕೀಯ ಬೆಳವಣಿಗೆ; ಎಲ್ಲವನ್ನೂ ಹೇಳ್ತೀನಿ ಎಂದ ರಮೇಶ್ ಜಾರಕಿಹೊಳಿ

 

Home add -Advt

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನಪರಿಷತ್ ಚುನಾವಣೆಯಲ್ಲಿ ಬೆಳಗಾವಿಯಲ್ಲಿ ಬಿಜೆಪಿ ಸೋಲಲು ಕಾರಣವೇನು ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ತಮ್ಮದೇ ಪಕ್ಷದ ಶಾಸಕ ರಮೇಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲಿಸಿದ್ದೇ ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕವಟಗಿಮಠ ಸೋಲನುಭವಿಸಲು ಕಾರಣ ಎಂಬ ಚರ್ಚೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಬಿಜೆಪಿ ಸೋಲುವುದಕ್ಕೆ ಕಾರಣ ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ. ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಿ ಹೇಳಿಕೆ ನೀಡುತ್ತೇನೆ ಎಂದಿದ್ದಾರೆ.

ಪರಿಷತ್ ಚುನಾವಣೆಗೂ ಮೊದಲು ಕೆಲ ರಾಜಕೀಯ ಬೆಳವಣಿಗೆ ನಡೆದಿದೆ. ಚುನಾವಣೆಗೆ 4 ದಿನಗಳ ಮೊದಲು ಬೆಳಗಾವಿ ರಾಜಕೀಯದಲ್ಲಿ ಕೆಲ ವಿದ್ಯಮಾನಗಳಾಗಿವೆ. ಈ ಎಲ್ಲಾ ವಿಚಾರಗಳನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಹೇಳಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಭಯ ಶುರುವಾಗಿದೆ. ಅವರೊಬ್ಬ ವೇಸ್ಟ್ ಬಾಡಿ. ಇನ್ನು ಡಿ.ಕೆ.ಶಿವಕುಮಾರ್ ಬಗ್ಗೆ ಮುಂದೆ ಮಾತಾಡುತ್ತೇನೆ ಎಂದು ಹೇಳಿದರು.
ಕೆ.ಕೆ.ಎಕ್ಸ್ ಪ್ರೆಸ್ ರೈಲು ಸ್ಫೋಟ ಬೆದರಿಕೆ; ಆರೋಪಿ ಬಂಧನ

Related Articles

Back to top button