Kannada NewsLatest

ಬೆಂಕಿಗೆ ಜಿಗಿದ ರಮೇಶ್ ಜಾರಕಿಹೊಳಿ ಅಭಿಮಾನಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಸಲೀಲೆ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ರಾಜೀನಾಮೆ ಬೆನ್ನಲ್ಲೇ ಬೆಳಗಾವಿಯಲ್ಲಿ ಬೆಂಬಲಿಗರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನೆ ವೇಳೆ ರಮೇಶ್ ಜಾರಕಿಹೊಳಿ ಬೆಂಬಲಿಗನ ಮೈಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ.

ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ ಹೆಚ್ಚುತ್ತಿದ್ದು, ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. ಈ ವೇಳೆ ಬೆಂಕಿಹಚ್ಚಿದ ಟೈಯರ್ ಮೇಲೆ ಜಿಗಿದು ಆತ್ಮಹತ್ಯೆಗೆ ಬೆಂಬಲಿಗನೋರ್ವ ಯತ್ನಿಸಿದ್ದಾನೆ. ತಕ್ಷಣ ಪೊಲೀಸರು ಆತನನ್ನು ಎಳೆದುಕೊಂಡು ರಕ್ಷಿಸಿದ್ದಾರೆ. ಆದರೆ ಆತನ ತೊಡೆಯ ಭಾಗಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಕಾಲಿನ ಭಾಗ ಸುಟ್ಟು ಹೋಗಿದೆ. ತಕ್ಷಣ ಆತನನ್ನು ಗೋಕಾಕ್ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಇದೇ ವೇಳೆ ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ರಮೇಶ್ ನಿರ್ದೋಷಿಯಾದ ಬಳಿಕ ಮತ್ತೆ ಸಚಿವ ಸ್ಥಾನ ನೀಡಬೇಕು ಎಂದು ಬೆಂಬಲಿಗರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Related Articles

Back to top button