Kannada NewsLatest

ಬೆಂಬಲಿಗರ ಆಕ್ರೋಶ; ಬಸ್ ಗಳ ಮೇಲೆ ಕಲ್ಲು ತೂರಾಟ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬೆಂಬಲಿಗರ ಆಕ್ರೋಶ ಭುಗಿಲೆದ್ದಿದ್ದು, ಬೆಳಗಾವಿ, ಗೋಕಾಕ್ ನಲ್ಲಿ ಕೆಲವೆಡೆ ಮಾರ್ಕೆಟ್ ಬಂದ್ ಮಾಡಿಸುತ್ತಿದ್ದರೆ, ಇನ್ನು ಹಲವಡೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಮೇಶ್ ಜಾರಕಿಹೊಳಿ ಬೆಂಬಲಿಗರು ಗೋಕಾಕ್ ಬಸ್ ನಿಲ್ದಾಣಕ್ಕೆ ತೆರಳಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. 8 ಬಸ್ ಗಳ ಗಾಜುಗಳನ್ನು ಪುಡಿ ಪುಡಿ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

Home add -Advt

ಅಲ್ಲದೇ ಗೋಕಾಕ್ ಫಾಲ್ಸ್ ರಸ್ತೆ, ಕೊಣ್ಣೂರ, ಮಮದಾರ, ಪಾರನಟ್ಟಿ ಕ್ರಾಸ್ ನಲ್ಲಿ ರಸ್ತೆ ತಡೆ ನಡೆಸಿ, ಪ್ರತಿಭಟನೆ ನಡೆಸಿದ್ದಾರೆ. ಕೋಕಾಕ್ ನಗರದ ಬಸವ ವೃತ್ತದಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು ಜಾರಕಿಹೊಳಿ ರಾಜೀನಾಮೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

Related Articles

Back to top button