Latest

ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಸಲೀಲೆ ಸಿಡಿ ಪ್ರಕರಣ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬೆನ್ನಲ್ಲೇ ಅವರ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದು, ಇಂದು ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಧರಣಿ ನಡೆಸಿದರು.

ರಾಸಲೀಲೆ ಸೀಡಿ ರಾಜಕೀಯ ಷಡ್ಯಂತವಾಗಿದ್ದು, ಈ ಬಗ್ಗೆ ತನಿಖೆಯಾಗಿ ಸತ್ಯಾಸತ್ಯತೆ ಹೊರಬರಬೇಕು ಎಂದು ಆಗ್ರಹಿಸಿದರು. ಅಲ್ಲದೇ ರಮೇಶ್ ಜಾರಕಿಹೊಳಿ ರಾಜೀನಾಮೆ ವಾಪಸ್ ಪಡೆಯಬೇಕು ಎಂದು ಬೆಂಬಲಿಗರು ಆಗ್ರಹಿಸಿದ್ದಾರೆ.

ಸಿಡಿ ಪ್ರಕರಣ ಒಂದು ವ್ಯವಸ್ಥಿತ ಪಿತೂರಿಯಾಗಿದ್ದು, ಇದರ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗಬೇಕು. ಈ ನಿಟ್ಟಿನಲ್ಲಿ ತನಿಖೆಯಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

Home add -Advt

Related Articles

Back to top button