Kannada NewsLatest

ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಮುಂದಾದ ರಮೇಶ್ ಜಾರಕಿಹೊಳಿ ಬೆಂಬಲಿಗರು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ ಬೆಳಗಾವಿಯಲ್ಲಿ ಭುಗಿಲೆದ್ದಿದ್ದು, ಹಲವೆಡೆ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದರೆ, ಗೋಕಾಕ್ ತಾಲೂಕಿನಲ್ಲಿ ಸರ್ಕಾರಿ ಬಸ್ ಗಳನ್ನು ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೋಕಾಕ್-ಧಾರವಾಡ ರಸ್ತೆ ತಡೆ ನಡೆಸಿರುವ ರಮೇಶ್ ಜಾರಕಿಹೊಳಿ ಬೆಂಬಲಿಗರು, ಮಾಲದಿನ್ನಿ ಕ್ರಾಸ್ ನಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಇದೇ ವೇಳೆ ರಮೇಶ್ ಬೆಂಬಲಿಗರಿಬ್ಬರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಈ ವೇಳೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಇಬ್ಬರನ್ನು ಎಳೆದೊಯ್ದಿದ್ದಾರೆ. ಇನ್ನೊಂದೆದೆ ಗೋಕಾಕ್ ನಲ್ಲಿ ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ಬಸ್ ಸಂಚಾರವನ್ನು ಬಂದ್ ಮಾಡಲಾಗಿದೆ. ಬಸ್ ಸಂಚಾರ ದಿಢೀರ್ ಬಂದಾದ ಹಿನ್ನೆಲೆಯಲ್ಲಿ ಬಸ್ ಗಳಿಲ್ಲದೇ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ.

ಈ ನಡುವೆ ರಮೇಶ್ ಜಾರಕಿಹೊಳಿಗೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರೆಯುವುದಾಗಿ ಬೆಂಬಲಿಗರು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button