ದಯವಿಟ್ಟು ರಾಜ್ಯದ ಜನತೆಯ ಚಡ್ಡಿ ಉದುರಿಸಬೇಡಿ; ನಿಮ್ಮ ನಿಮ್ಮ ಚಡ್ಡಿ ಉದುರಿಸಿಕೊಳ್ಳಿ; ಕಾಂಗ್ರೆಸ್-ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ ಹೆಚ್.ಡಿ.ಕೆ
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಆರ್.ಎಸ್.ಎಸ್ ಚಡ್ಡಿ ಸುಡುವ ಅಭಿಯಾನ ಆರಂಭಿಸುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜಕೀಯ ನಾಯಕರ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಮನ ಬಂದಂತೆ ವಾಕ್ಸಮರ ನಡೆಸಿದ್ದಾರೆ. ಉಭಯ ಪಕ್ಷಗಳ ನಾಯಕರ ವಿರುದ್ಧ ಕಿಡಿಕಾರಿರುವ ಮಾಜಿ ಸಿಎಂ ಕುಮಾರಸ್ವಾಮಿ ದಯವಿಟ್ಟು ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ರಾಜ್ಯದ ಜನತೆಯ ಚಡ್ದಿ ಉದುರುಸಬೇಡಿ, ನಿಮ್ಮ ನಿಮ್ಮ ಚಡ್ಡಿ ಉದುರಿಸಿಕೊಳ್ಳಿ ತೊಂದರೆಯಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಹೇಳಿಕೆಗಳು ವಿಪರೀತಕ್ಕೆ ಹೋಗುತ್ತಿವೆ. ಕಾಂಗ್ರೆಸ್ ನಾಯಕರು ಚಡ್ಡಿ ಸುಡುವ ಹೇಳಿಕೆ ಕೊಡುತ್ತಿದ್ದಾರೆ. ಗೃಹ ಸಚಿವ ಅರಗ ಜ್ಞಾನೇಂದ್ರ ಕಾಂಗ್ರೆಸ್ ಚಡ್ಡಿ ಉದುರಿಸಿದ್ದೇವೆ ಅಂತಿದ್ದಾರೆ. ನಿಮ್ಮ ನಿಮ್ಮ ಚಡ್ಡಿ ಉದುರಿಸಿಕೊಳ್ಳಿ ಆದರೆ ರಾಜ್ಯದ ಜನತೆಯ ಚಡ್ಡಿ ಉದುರಿಸಬೇಡಿ. ಎರಡೂ ಪಕ್ಷದ ನಾಯಕರು ದಯವಿಟ್ಟು ರಾಜ್ಯದ ಜನತೆ ಗೌರವಯುತವಾಗಿ ಬದುಕುವ ವಾತಾವರಣ ನಿರ್ಮಾಣ ಮಾಡಿ ಎಂದು ಗುಡುಗಿದರು.
ಆರ್.ಎಸ್.ಎಸ್ ರಾಷ್ಟ್ರ ಭಕ್ತಿ, ಹಿಂಧುತ್ವದ ಹೆಸರಲ್ಲಿ ಹೈಜಾಕ್ ಮಾಡುತ್ತಿದೆ. ಮೈತ್ರಿ ಸರ್ಕಾರವನ್ನು ಉರುಳಿಸಿ ಶಾಸಕರನ್ನು ಖರೀದಿ ಮಾಡಿ ಬಿಜೆಪಿ ಅಧಿಕಾರಕ್ಕೆ ಬಂತು. ಅಧಿಕಾರಕ್ಕಾಗಿ ಏನೆಲ್ಲ ಮಾಡಿದರು. ಇಂದು ಎರಡೂ ಪಕ್ಷಗಳು ಪರಸ್ಪರ ಭ್ರಷ್ಟಾಚಾರದ ಬಗ್ಗೆ ಆರೋಪಿಸಿಕೊಳ್ಳುತ್ತಿದ್ದಾರೆ. ಪರಿವರ್ತನೆ, ಬದಲಾವಣೆ ಹೆಸರಲ್ಲಿ ಸರ್ಕಾರವನ್ನು ರಚನೆ ಮಾಡಿದರು. ಇಂದು ಸರ್ಕಾರದ ಹಣ ಯಾವ ರೀತಿ ಲೂಟಿಯಾಗುತ್ತಿದೆ ಗುತ್ತಿಗೆದಾರರ ಪರಿಸ್ಥಿತಿ ಏನಾಗಿದೆ? ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಎತ್ತ ಸಾಗಿವೆ? ಎಂದು ಪ್ರಶ್ನಿಸಿದರು.
ಯಲ್ಲಾಪುರ-ಶಿರಸಿ ಅರಣ್ಯ ಸೇರಿ ಕರಾವಳಿ ಜಿಲ್ಲೆಯ 4 ಕಡೆಗಳಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ಆಕ್ಟೀವ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ