Belagavi NewsBelgaum NewsKarnataka NewsPolitics

*ಬಡಸ್ ಗ್ರಾಮದಲ್ಲಿ ದುರ್ಗಾಮಾತೆಯ ಪೂಜೆಯಲ್ಲಿ ಪಾಲ್ಗೊಂಡ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಲೋಕ ಕಲ್ಯಾಣಕ್ಕಾಗಿ 21 ದಿನಗಳ ಮೌನಾನುಷ್ಠಾನ ಕೈಗೊಂಡಿರುವ ಶ್ರೀ ಪ್ರಶಾಂತ ದೇವರ ಆಶೀರ್ವಾದ ಪಡೆದರು

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಡಸ್ ಗ್ರಾಮದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಆದಿಶಕ್ತಿ ದುರ್ಗಾಮಾತಾ ಯುವಕ ಮಂಡಳದ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಶ್ರೀ ದುರ್ಗಾಮಾತೆಯ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಪಾಲ್ಗೊಂಡು ದೇವಿಯ ದರ್ಶನ ಪಡೆದರು.


ಈ ಸಂದರ್ಭದಲ್ಲಿ ದುರ್ಗಾಮಾತೆಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಸುಖ-ಶಾಂತಿ, ಸಮೃದ್ಧಿ ಹಾಗೂ ಸರ್ವರ ಒಳಿತಿಗಾಗಿ ಪ್ರಾರ್ಥಿಸಿದರು. ನವರಾತ್ರಿ ಹಬ್ಬವು ಭಕ್ತಿ, ಶ್ರದ್ಧೆ ಮತ್ತು ಧಾರ್ಮಿಕ ಪರಂಪರೆಯ ಪ್ರತೀಕವಾಗಿದ್ದು, ದುರ್ಗಾಮಾತೆಯ ಆರಾಧನೆಯು ಜನರಲ್ಲಿ ಸಕಾರಾತ್ಮಕ ಚಿಂತನೆ, ಧೈರ್ಯ ಹಾಗೂ ಭರವಸೆಯನ್ನು ಮೂಡಿಸಲಿ ಎಂದು ಹಾರೈಸಿದರು. ಬಳಿಕ ಗ್ರಾಮಸ್ಥರಿಗೆ ನವರಾತ್ರಿ ಹಬ್ಬದ ಶುಭಾಶಯಗಳನ್ನು ತಿಳಿಸಿ, ಎಲ್ಲರ ಜೀವನದಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಲಿ ಎಂದು ಶುಭ ಕೋರಿದರು.

ಶ್ರೀ ಪ್ರಶಾಂತ ದೇವರ ದರ್ಶನ

ಬಳಿಕ, ಲೋಕ ಕಲ್ಯಾಣದ ಸಂಕಲ್ಪದೊಂದಿಗೆ ಅನ್ನ, ನೀರನ್ನು ತ್ಯಜಿಸಿ ಸತತ 21 ದಿನಗಳ ಕಾಲ ಮೌನಾನುಷ್ಠಾನ ಕೈಗೊಂಡಿರುವ ಪರಮಪೂಜ್ಯ ಶ್ರೀ ಪ್ರಶಾಂತ ದೇವರು ನೆಲೆಸಿರುವ ಶ್ರೀ ಜಗದ್ಗುರು ಮಡಿವಾಳೇಶ್ವರ ತಪೋಧಾಮಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಶ್ರೀಗಳ ದರ್ಶನ ಪಡೆದು ಆಶೀರ್ವಾದ ಸ್ವೀಕರಿಸಿದರು. ಲೋಕದ ಒಳಿತಿಗಾಗಿ ಶ್ರೀಗಳು ಕೈಗೊಂಡಿರುವ ಮೌನಾನುಷ್ಠಾನಕ್ಕೆ ಗೌರವ ಸಲ್ಲಿಸಿದ ಅವರು, ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳು ಮತ್ತಷ್ಟು ಬಲಗೊಳ್ಳಲಿ ಎಂಬ ಆಶಯ ವ್ಯಕ್ತಪಡಿಸಿದರು.


ಧಾರ್ಮಿಕ ಆಚರಣೆಗಳು ಮತ್ತು ಇಂತಹ ಆಧ್ಯಾತ್ಮಿಕ ಅನುಷ್ಠಾನಗಳು ಜನರಲ್ಲಿ ಭಕ್ತಿ, ನಂಬಿಕೆ ಹಾಗೂ ಪರಸ್ಪರ ಪ್ರೀತಿಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಈ ಭೇಟಿಯ ಸಂದರ್ಭದಲ್ಲಿ ಭಕ್ತಿಭಾವದಿಂದ ಶ್ರೀಗಳ ಆಶೀರ್ವಾದ ಪಡೆದರು.


ಈ ವೇಳೆ ಗ್ರಾಮದ ಹಿರಿಯರು, ಭಕ್ತಾದಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button