*ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ, ಸ್ಮಾರಕ ಭವನ ಉದ್ಘಾಟಿಸಿದ ಸಿಎಂ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಮತ್ತು ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನ ಮತ್ತು ಭೋಜನಾಲಯ ವನ್ನು ಉದ್ಘಾಟಿಸಿದರು.
ರೇವಣಸಿದ್ದೇಶ್ವರ ಸಿಂಹಾಸನಾಧಿಶ್ವರ ನಿರಂಜನಾನಂದಪುರಿ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಬೈರತಿ ಸುರೇಶ್, ಶಿವರಾಜ್ ತಂಗಡಗಿ ಜತೆಗೆ ಶಾಸಕರಾದ ಮಹಂತೇಶ್ ಕೌಜಲಗಿ, ಎಚ್.ವೈ.ಮೇಟಿ, ಮಾಜಿ ಸಚಿವ ಎಚ್.ಎಂ.ರೇವಣ್ಣ, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಸೈನಿಕ ಶಾಲೆಯ ವಿದ್ಯಾರ್ಥಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಛಾಯಾಚಿತ್ರ ತೆಗೆಸಿಕೊಂಡು ಶುಭ ಹಾರೈಸಿದರು.
ಸಂಗೊಳ್ಳಿ ರಾಯಣ್ಣ ಶೌರ್ಯಭೂಮಿ:
ಸಂಗೊಳ್ಳಿ ರಾಯಣ್ಣ ಶೌರ್ಯಭೂಮಿಯಲ್ಲಿ ಕಿತ್ತೂರು ಸಂಸ್ಥಾನದಲ್ಲಿ ವೀರತನಕ್ಕೆ ಹೆಸರಾದ ರೋಗಣ್ಣವರ ಮನೆ, ಹುಲಿಯೊಂದಿಗೆ ಹೋರಾಡುತ್ತಿರುವ ರಾಯಣ್ಣನ ತಂದೆ ಭರಮಪ್ಪ: ಭರಮಪ್ಪನ ಸಾಹಸ ಮೆಚ್ಚಿ ದೊರೆ ಮಲ್ಲಸರ್ಜ ರಕ್ತಮಾನ್ಯ ಭೂಮಿಯನ್ನು ನೀಡುವ ದೃಶ್ಯ.
ಭರಮಪ್ಪ ಹಾಗೂ ಕೆಂಚಮ್ಮ ದಂಪತಿಗೆ ಜನಿಸಿದ ಮಗುವಿಗೆ ರಾಯಣ್ಣ ಎಂದು ನಾಮಕರಣ ದೃಶ್ಯ, ಕುಸ್ತಿ ಕಣದಲ್ಲಿ ಆಡಿ ಗೆದ್ದ ತರುಣ ರಾಯಣ್ಣ; ಕುಸ್ತಿಯಲ್ಲಿ ಗೆದಗದ ರಾಯಣ್ಣನಿಗೆ ದೊರೆ ಖಡ್ಗ ನೀಡುವುದು; ಕಿತ್ತೂರು ರಾಣಿ ಚೆನ್ಮಮ್ಮನ ದರ್ಬಾರ್; ಬ್ರಿಟೀಷರೊಂದಿಗಿನ ಮೊದಲ ಆಂಗ್ಲೋ-ಕಿತ್ತೂರು ಯುದ್ಧ; ಹೀಗೆ ರಾಯಣ್ಣನ ಬಾಲ್ಯದಿಂದ ಹಿಡಿದು ಕೊನೆ ಗಳಿಗೆಯ ಹೋರಾಟದ ದೃಶ್ಯಗಳು ಶಿಲ್ಪವನದಲ್ಲಿ ಜೀವ ಪಡೆದುಕೊಂಡಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ