ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಾಜಿ ಶಾಸಕ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್ ಗೆ ಮತ್ತೆ ಸಂಕಷ್ಟ ಎದುರಾಗಿದೆ.
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಸಂಜಯ್ ಪಾಟೀಲ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ್, ಸಂಜಯ್ ಪಾಟೀಲ್ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಸಂಜಯ್ ಪಾಟೀಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡು, ಆಯೋಗದ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ರಾತ್ರಿ ರಾಜಕಾರಣ ಮಾಡಿದ್ದಕ್ಕೆ ಶಾಸಕಿಯಾಗಿ ಗೆದ್ದು ಬಂದಿದ್ದಾರೆ ಎಂದು ಹೇಳುವ ಮೂಲಕ ಸಂಜಯ್ ಪಾಟೀಲ್ ವಿವಾದ ಸೃಷ್ಟಿಸಿದ್ದರು.
ರಾಜ್ಯಾದ್ಯಂತ ಇದಕ್ಕೆ ತೀವ್ರ ವಿರೋಧ, ಪ್ರತಿಭಟನೆ ನಡೆಯುತ್ತಿದೆ. ಯಾವೊಬ್ಬ ಬಿಜೆಪಿ ನಾಯಕರೂ ಸಂಜಯ ಪಾಟೀಲ ಅವರನ್ನು ಸಮರ್ಥಿಸುವ ಗೋಜಿಗೆ ಹೋಗಲಿಲ್ಲ.
ಸಂಜಯ್ ಪಾಟೀಲ್ ವಿರುದ್ಧ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಮುಖಂಡರು
ರಾಮಾಯಣದ ‘ರಾವಣ’ ಖ್ಯಾತಿಯ ಅರವಿಂದ್ ತ್ರಿವೇದಿ ಇನ್ನಿಲ್ಲ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ