Belagavi NewsBelgaum NewsKannada NewsKarnataka NewsLatestPolitics

*ಟಾರ್ಗೆಟ್ ಮಾಡುವುದರಲ್ಲಿ ಬಿಜೆಪಿಯವರು ನಿಸ್ಸೀಮರು; ಆದರೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲ್ಲ ಎಂದ ಸಂತೋಷ್ ಲಾಡ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಂಕ್ರಾಂತಿ ವೇಳೆಗೆ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಹೇಳಿಕೆ ಪ್ರತಿಕ್ರಿಯಿಸಿರುವ ಸಚಿವ ಸಂತೋಷ್ ಲಾಡ್, ಭವಿಷ್ಯ ನುಡಿಯುವ ಶಕ್ತಿ ನಮಗಿಲ್ಲ ಎಂದು ಟಾಂಗ್ ನೀಡಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಸಂತೋಷ್ ಲಾಡ್, ಸಂವಿಧಾನಬದ್ಧವಾಗಿ ರಾಜ್ಯದಲ್ಲಿ ಸರ್ಕಾರ ರಚನೆಯಾಗಿದೆ. ರಾಜ್ಯದಲ್ಲಿ ಹೇಗೆ ಸರ್ಕಾರ ಪತನವಾಗಲಿದೆ ಎಂದು ಅವರನ್ನೇ ಕೇಳಿ ಎಂದು ಹೇಳಿದ್ದಾರೆ.

ಟಾರ್ಗೆಟ್ ಮಾಡುವುದರಲ್ಲಿ ಬಿಜೆಪಿಯವರು ಬಹಳ ನಿಸ್ಸೀಮರು. ಕಳೆದ 10 ವರ್ಷಗಳಲ್ಲಿ ಬಿಜೆಪಿಯವರು 11 ಸರ್ಕಾರ ಕೆಡವಿದ್ದಾರೆ. ಬಿಜೆಪಿಯವರು ಸಾವಿರಕ್ಕೂ ಹೆಚ್ಚು ಶಾಸಕರನ್ನು ಖರೀದಿ ಮಾಡಿದ್ದಾರೆ. 2024ಕ್ಕೆ ದೇಶದಲ್ಲಿ ಬಿಜೆಪಿ ಸರ್ಕಾರ ಇರಲಿಲ್ಲ ಎಂಬುದು ನನ್ನ ಅಭಿಪ್ರಾಯ ಎಂದರು.

Home add -Advt

Related Articles

Back to top button