ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಸರ್ದಾರ್ ಪ್ರೌಢಶಾಲೆಯಲ್ಲಿ ಹಿಜಾಬ್ ಕಿರಿಕ್ ಆರಂಭವಾಗಿದ್ದು, ಪೊಲೀಸರು ಹಾಗೂ ಸಾಮಾಜಿಕ ಹೋರಾಟಗಾರ್ತಿ ಸೀಮಾ ಇನಾಮದಾರ್ ನಡುವೆ ವಾಗ್ವಾದ ನಡೆದಿದೆ.
ಸರ್ದಾರ್ ಪ್ರೌಢಶಾಲೆಗೆ ವಿದ್ಯಾರ್ಥಿನಿಯರು ಇಂದು ಕುದ ಹಿಜಾಬ್ ಧರಿಸಿ ಆಗಮಿಸಿದ್ದು, ಈ ವೇಳೆ ಶಾಲಾ ಸಿಬ್ಬಂದಿಗಳು ಅವರನ್ನು ಪ್ರತ್ಯೇಕ ಕೊಠಡಿಗೆ ಕಳುಹಿಸಿ ಹಿಜಾಬ್ ತೆಗೆದು ಬರುವಂತೆ ಸೂಚಿಸಿದ್ದಾರೆ. ಇದಕ್ಕೆ ವಿದ್ಯಾರ್ಥಿನಿಯರು ನಿರಾಕರಿಸಿದ್ದಾರೆ. ಹಿಜಾಬ್ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಹೈಕೋರ್ಟ್ ಮುಂದಿನ ಆದೇಶದವರೆಗೂ ಸಮವಸ್ತ್ರ ಕಡ್ಡಾಯ ಎಂದು ಸೂಚಿಸಲಾಗಿದೆ ಎಂದು ಸಿಬ್ಬಂದಿಗಳು ಮನವೊಲಿಕೆಗೆ ಯತ್ನಿಸಿದ್ದಾರೆ. ಆದಾಗ್ಯೂ ವಿದ್ಯಾರ್ಥಿನಿಯರು ಹಿಜಾಬ್ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಈ ವೇಳೆ ಸಾಮಾಜಿಕ ಹೋರಾಟಗಾರ್ತಿ ಸೀಮಾ ಸಿನಾಮ್ ದಾರ್ ಶಾಲೆಗೆ ಎಂಟ್ರಿಕೊಟ್ಟಿದ್ದು, ಮೊದಲಿನಿಂದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಶಾಲೆಗೆ ಬರುತ್ತಿದ್ದಾರೆ. ಈಗ ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೊಠಡಿಗೆ ಕಳುಹಿಸಿ ಹಿಜಾಬ್ ತೆಗೆಸುತ್ತಿರುವುದೇಕೆ? ಬೇರೆ ವಿದ್ಯಾರ್ಥಿನಿಯರನ್ನೂ ಹಾಗೆ ಕರೆದುಕೊಂದು ಹೋಗಿ ನೋಡೋಣ ಎಂದು ಕಿಡಿಕಾರಿದ್ದಾರೆ. ಈ ವೇಳೆ ಸೀಮಾ, ಪೊಲೀಸರೊಂದಿಗೂ ವಾಗ್ವಾದಕ್ಕಿಳಿದಿದ್ದಾರೆ. ಪೊಲೀಸರು ಶಾಲಾ ಆವರಣದಿಂದ ಸೀಮಾ ಇನಾಮ್ ದಾರ್ ಅವರನ್ನು ಹೊರಕಳುಹಿಸಿದ್ದಾರೆ.
ಶಾಲೆಯಲ್ಲಿ ಹಿಜಾಬ್ ಕಿರಿಕ್ ಹಿನ್ನೆಲೆಯಲ್ಲಿ ಸರ್ದಾರ್ ಸರ್ಕಾರಿ ಪ್ರೌಢ ಶಾಲೆಗೆ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭಾರೀ ವೈರಲ್ ಆದ ಶಾಸಕಿ ಅಂಜಲಿ ನಿಂಬಾಳ್ಕರ್ ಟ್ವೀಟ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ