ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯಕ್ಕೆ ಹೊಸ ರೂಪಾಂತರಿ ತಳಿ ಒಮಿಕ್ರಾನ್ ಎಂಟ್ರಿ ಕೊಟ್ಟಿದ್ದು, ಕೊರೊನಾ ಮೂರನೇ ಅಲೆ ಆರಂಭವಾಗಿದ್ದರೂ ಕೆಲ ಶಾಲೆಗಳಲ್ಲಿ ಕೋವಿಡ್ ನಿರ್ಲಕ್ಷ್ಯ ಮುಂದುವರೆದಿದೆ. ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಒಂದೇ ಕೊಠದಿಯಲ್ಲಿ ಕೂರಿಸಿ ಪಾಠ ಮಾಡುತ್ತಿರುವ ದೃಶ್ಯ ಬೆಳಗಾವಿಯಲ್ಲಿ ಕಂಡುಬಂದಿದೆ.
ಶಾಲಾ-ಕಾಲೇಜುಗಳಿಗಾಗಿಯೇ ಪ್ರತ್ಯೇಕ ಕೋವಿಡ್ ಮಾರ್ಗಸೂಚಿ ಬಿಡುಗಡೆಯಾಗಿದ್ದರೂ ನಿಯಮಗಳನ್ನು ಉಲ್ಲಂಘಿಸಲಾಗುತ್ತಿರುವುದು ವಿಪರ್ಯಾಸ. 150ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಒಟ್ಟಿಗೇ ಕೂರಿಸಿ ಉಪನ್ಯಾಸಕರು ಪಾಠ ಮಾಡುತ್ತಿರುವ ಘಟನೆ ಬೆಳಗಾವಿಯ ಸರ್ದಾರ್ ಸರ್ಕಾರಿ ಪಿಯು ಕಾಲೇಜಿನಲ್ಲಿ ಬೆಳಕಿಗೆ ಬಂದಿದೆ.
ವಿದ್ಯಾರ್ಥಿಗಳು, ಉಪನ್ಯಾಸಕರು ಮಾಸ್ಕ್, ದೈಹಿಕ ಅಂತರ ಪಾಲನೆ ಮಾಡದೇ ಪಾಠ ಕೇಳುವುದರಲ್ಲಿ ನಿರತರಾಗಿದ್ದಾರೆ. ರಾಜ್ಯದಲ್ಲಿ ಒಮಿಕ್ರಾನ್ ಭೀತಿ ಇದ್ದರೂ ಶಾಲಾ-ಕಾಲೇಜುಗಳಲ್ಲಿ ನಿರ್ಲಕ್ಷ್ಯ ಮಾಡುತ್ತಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ.
ಒಮಿಕ್ರಾನ್ ಸೋಂಕಿತ ವೈದ್ಯನಿಗೆ ಕೊರೊನಾ ದೃಢ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ