Kannada NewsLatest

ಯಾರನ್ನೂ ಸುಮ್ಮನೇ ಸಿಲುಕಿಸೋಕಾಗಲ್ಲ – ಸತೀಶ್ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಿಡಿ ಪ್ರಕರಣ ಬೆಳಕಿಗೆ ಬಂದಾಗಿನಿಂದ ನನ್ನ ವಿರುದ್ಧ ಆರೋಪ ಕೇಳಿಬರುತ್ತಿದ್ದು, ಈ ಪ್ರಕರಣದಲ್ಲಿ ನನ್ನನ್ನು ಸಿಲುಕಿಸುವ ಷಡ್ಯಂತ್ರ ನಡೆದಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿರೋ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಯಾರನ್ನೂ ಯಾರೂ ಸಿಲುಕಿಸಲು ಆಗಲ್ಲ ಎಂದು ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಪ್ರಕರಣದ ಬಗ್ಗೆ ರಮೇಶ್ ಜಾರಕಿಹೊಳಿ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸಲಿ, ಸತ್ಯಾಸತ್ಯತೆ ಹೊರಬರಲಿ. ಸುಮ್ಮನೇ ಯಾರನ್ನೋ ಯಾರು ಸಿಲುಕಿಸಲಾಗಲ್ಲ. ತನಿಖೆ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ ಎಂದು ಹೇಳಿದರು.

Home add -Advt

ಇನ್ನು ಯುವತಿ ವಿಡಿಯೋದಲ್ಲಿ ಹೇಳಿಕೆ ನೀಡಿದ್ದಾಳೆ ಅಷ್ಟೇ. ಆಕೆ ಕಾನೂನಾತ್ಮಕವಾಗಿ ಮುಂದೆ ಬಂದು ಹೇಳಿಕೆ ನೀಡಬೇಕು. ಬಳಿಕ ವಿಚಾರಣೆ ನಡೆದು ತನಿಖೆಯಾಗಬೇಕು. ಅಲ್ಲಿಯವರೆಗೆ ಕಾದುನೋಡೋಣ ಎಂದು ತಿಳಿಸಿದರು.

Related Articles

Back to top button