ಬಿಜೆಪಿ ರಾಜ್ಯಾಧ್ಯಕ್ಷರು ಅನವಶ್ಯಕ ಗೊಂದಲಗಳನ್ನು ಸೃಷ್ಟಿಸುತ್ತಾರೆ; ಅವರಿಗೆ ಇತಿಹಾಸ ಗೊತ್ತಿಲ್ಲ; ಸತೀಶ ಜಾರಕಿಹೊಳಿ ವಾಗ್ದಾಳಿ
ಪ್ರಗತಿವಾಹಿನಿ ಸುದ್ದಿ; ಗೋಕಾಕ: ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ವಿವಾದಾತ್ಮಕ ಹೇಳಿಕೆ ನೀಡುವುದು ಹೊಸದಲ್ಲ. ಅವರು ಅಧ್ಯಕ್ಷರಾದಾಗಿನಿಂದ ಗೊಂದಲದ ಹೇಳಿಕೆಗಳನ್ನೇ ನೀಡುತ್ತಾರೆ. ಬಹುಶಃ ಅವರ ಹೇಳಿಕೆಯ ಬಗ್ಗೆ ಅವರಿಗೆ ಕನ್ಫ್ಯೂಶನ್ ಇರಬಹುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು ಹಿಂದೆ, ಮುಂದೆ ಗೊತ್ತಿಲ್ಲದೇ ಮಾತನಾಡುತ್ತಾರೆ. ಅವರಿಗೆ ಬೌಗೋಳಿಕ, ರಾಜಕೀಯ, ಸಾಮಾಜಿಕ ಇತಿಹಾಸ ಗೊತ್ತಿಲ್ಲ. ಅನವಶ್ಯಕವಾಗಿ ಗೊಂದಲಗಳನ್ನು ಸೃಷ್ಟಿ ಮಾಡುತ್ತಾರೆ ಎಂದು ಹರಿಹಾಯ್ದರು.
ಈಗಾಗಲೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರು ನಳೀನಕುಮಾರ್ ಕಟೀಲ್ ಗೆ ಬುದ್ಧಿ ಹೇಳಿದ್ದಾರೆ. ಇದರಿಂದಲಾದರು ಅವರು ಸುಧಾರಣೆಯಾಗಬೇಕು. ಜನ ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ. ಈ ಬಗ್ಗೆ ಎಲ್ಲ ಮುಖಂಡರು ಎಚ್ಚರಿಕೆಯಿಂದಿರಬೇಕು ಎಂದು ಹೇಳಿದರು.
ದೊಡ್ಡ ರಾಜಕೀಯ ಪಕ್ಷದ ರಾಜ್ಯಾಧ್ಯಕ್ಷರಾಗಿ ಬೇಕಾಬಿಟ್ಟಿ ಹೇಳಿಕೆ ನೀಡುವುದು ಸರಿಯಲ್ಲ. ಇದರಿಂದ ಅವರಿಗೇ ಡ್ಯಾಮೇಜ್ ಆಗುತ್ತದೆ. ವಿವಾದವನ್ನು ಮೈಮೇಲೆ ಎಳೆದುಕೊಂಡಂತಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ