ಬದುಕಿನ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬದುಕಿನ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿದರೆ ಮಾತ್ರ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131ನೇ ಜಯಂತಿ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ. ತಂತ್ರಜ್ಞಾನದ ಯುಗದಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಅಗತ್ಯತೆ ಇದೆ. ಹೀಗಾಗಿ ವಿದ್ಯಾರ್ಥಿಗಳು ಲ್ಯಾಪ್‌ಟಾಪ್ ಅನ್ನು ಉನ್ನತ ಅಧ್ಯಯನಕ್ಕೆ ಬಳಕೆ ಮಾಡಬೇಕೆಂದರು. ಯಾವುದೇ ಸರ್ಕಾರಗಳು ಸೌಲಭ್ಯಗಳನ್ನು ಹಲವು ಭಾರೀ ನೀಡುವುದಿಲ್ಲ. ಆದ ಕಾರಣ ಸರ್ಕಾರ ನೀಡಿದ ಸೌಲಭ್ಯಗಳನ್ನು ಪಡೆದು ವಿದ್ಯಾರ್ಥಿಗಳು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ತಿಳಿಸಿದರು.
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದ ಸಂವಿಧಾನದಿಂದ ನಾವು ಇವತ್ತು ಶಿಕ್ಷಣ ಪಡೆಯಲು ಸಾಧ್ಯವಾಗಿದೆ. ಹೀಗಾಗಿ ಡಾ. ಅಂಬೇಡ್ಕರ್ ಅವರ ವಿಚಾರಗಳನ್ನು ತಿಳಿದುಕೊಂಡು ಅವುಗಳನ್ನು ಪರಿಪಾಲನೆ ಮಾಡಬೇಕೆಂದು ಸಲಹೆ ನೀಡಿದರು.
ರಾಚವಿವಿ ಕುಲಪತಿ ಪ್ರೊ. ಎಂ. ರಾಮಚಂದ್ರಗೌಡ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ರಾಚವಿವಿ ಕುಲಸಚಿವ ಪ್ರೊ. ಬಸವರಾಜ ಪದ್ಮಶಾಲಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಡಾ. ಉಮಾ ಸಾಲಿಗೌಡರ, ರಾಚವಿವಿ ಮೌಲ್ಯಮಾಪನ ಕುಲಸಚಿವ ಪ್ರೊ. ಶಿವಾನಂದ ಎಸ್. ಗೊರನಾಳ, ರಾಚವಿವಿ ಹಣಕಾಸು ಅಧಿಕಾರಿ ಪ್ರೊ. ಡಿ. ಎನ್. ಪಾಟೀಲ, ರಾಚವಿವಿ ಡಾ. ಬಿ. ಆರ್ .ಅಂಬೇಡ್ಕರ್ ಅಧ್ಯಯನ ಪೀಠ ಸಂಯೋಜಕ ಡಾ. ಗಜಾನನ ನಾಯ್ಕರಾಚವಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕ ವಿಶೇಷ ಅಧಿಕಾರಿ ಪ್ರೊ. ಚಂದ್ರಕಾಂತ ವಾಗಮಾರೆ ಉಪಸ್ಥಿತರಿದ್ದರು.
ಸ್ವಾವಲಂಬಿ, ಆರೋಗ್ಯವಂತ ಸಮಾಜ ನಿರ್ಮಾಣ ನಮ್ಮಗುರಿ: ಮುರುಗೇಶ ನಿರಾಣಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ