Cancer Hospital 2
Bottom Add. 3

*ಬೆಳಗಾವಿ ಗಡಿ ಭಾಗದಿಂದ ಒಬ್ಬರು ಮುಂದಿನ ದಿನಗಳಲ್ಲಿ ಸಿಎಂ ಆಗ್ತಾರೆ; ಶಾಸಕ ವಿಶ್ವಾಸ್ ವೈದ್ಯ ಭವಿಷ್ಯ*

ಹೈಕಮಾಂಡ್ ವಾರ್ನಿಂಗ್ ಬಳಿಕವೂ ಕಾಂಗ್ರೆಸ್ ನಲ್ಲಿ ಮುಂದುವರೆದ ಸಿಎಂ ಕುರ್ಚಿ ಗುದ್ದಾಟ


ಪ್ರಗತಿವಹಿನಿ ಸುದ್ದಿ; ಬೆಳಗಾವಿ: ಹೈಕಮಾಂಡ್ ಎಚ್ಚರಿಕೆ ನಡುವೆಯೂ ಕಾಂಗ್ರೆಸ್ ನಾಯಕರಲ್ಲಿ ಸಿಎಂ ಹುದ್ದೆ ಬಗೆಗಿನ ಹೇಳಿಕೆಗಳು ಮುಂದುವರೆದಿವೆ. ಇದೀಗ ಮತ್ತೋರ್ವ ಕೈ ಶಾಸಕರು ಬೆಳಗಾವಿ ಗಡಿ ಭಾಗದವರೊಬ್ಬರು ಮುಖ್ಯಮಂತ್ರಿಯಾಗ್ತಾರೆ ಎಂದು ಹೇಳುವ ಮೂಲಕ ಹೊಸ ಚರ್ಚೆ ಹುಟ್ಟು ಹಾಕಿದ್ದಾರೆ.

ಬೆಳಗಾವಿ ಜಿಲ್ಲೆಯ ಯರಗಟ್ಟಿಯಲ್ಲಿ ಮಾತನಾಡಿದ ಶಾಸಕ ವಿಶ್ವಾಸ್ ವೈದ್ಯ, ಮುಂದಿನ ದಿನಗಳಲ್ಲಿ ಬೆಳಗಾವಿ ಗಡಿ ಭಾಗದಿಂದ ಒಬ್ಬರು ಸಿಎಂ ಆಗ್ತಾರೆ. ಪೂರ್ವ ದಿಕ್ಕಿನಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಸತೀಶ್ ಜಾರಕಿಹೊಳಿ ಅಣ್ಣ ಸಿಎಂ ಆಗುವುದು ಅಷ್ಟೇ ಸತ್ಯ ಎಂದು ಹೇಳಿದ್ದಾರೆ.

ಸತೀಶ್ ಜಾರಕಿಹೊಳಿ ಸಿಎಂ ಆಗುವುದು ನೂರಕ್ಕೆ ನೂರರಷ್ಟು ಸತ್ಯ. ಅವರು ಪ್ರಭಾವಿ ನಾಯಕರಾಗಿ ಹೊರಹೊಮ್ಮುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಮತ್ತೆ ಚರ್ಚೆಗೆ ಕಾರಣವಗಿದೆ.

Bottom Add3
Bottom Ad 2

You cannot copy content of this page